Home ದಾವಣಗೆರೆ ಅಭಿನಂದನೆಗೆ ಅರ್ಹರು ನಾನಲ್ಲ ನೀವು, ನಾನು ನಿಮ್ಮವನೇ ನಿಮ್ಮಲ್ಲೇ ಒಬ್ಬನಾಗಿ ಈ ಹೋರಾಟ ಮುಂದೆಯೂ ಮುಂದುವರಿಸ್ತೇನೆ: ಸಿದ್ದರಾಮಯ್ಯ ಅಚ್ಚರಿ ನುಡಿ!
ದಾವಣಗೆರೆನವದೆಹಲಿಬೆಂಗಳೂರು

ಅಭಿನಂದನೆಗೆ ಅರ್ಹರು ನಾನಲ್ಲ ನೀವು, ನಾನು ನಿಮ್ಮವನೇ ನಿಮ್ಮಲ್ಲೇ ಒಬ್ಬನಾಗಿ ಈ ಹೋರಾಟ ಮುಂದೆಯೂ ಮುಂದುವರಿಸ್ತೇನೆ: ಸಿದ್ದರಾಮಯ್ಯ ಅಚ್ಚರಿ ನುಡಿ!

Share
ಸಿದ್ದರಾಮಯ್ಯ
Share

ಬೆಂಗಳೂರು: ಇಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವನ್ನು ಆಚರಣೆ ಮಾಡುತ್ತಿದ್ದೇವೆ. ಜೊತೆಗೆ ಹಿಂದುಳಿದ ಜಾತಿಗಳ ಜಾಗೃತಿ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನನಗೆ ಆಹ್ವಾನವನ್ನು ನೀಡಿದ್ದರು. ನಾನು ಪ್ರೀತಿಯಿಂದ ಒಪ್ಪಿಕೊಂಡೆ. ಆದರೆ ನನಗೆ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವನ್ನು ಕೂಡ ಇಟ್ಟುಕೊಂಡಿದ್ದಾರೆ ಎಂದು ಆಹ್ವಾನ ಪತ್ರಿಕೆಯನ್ನು ನೋಡಿದ ಮೇಲೆ ತಿಳಿಯಿತು. ಇದರ ಅವಶ್ಯಕತೆ ಇರಲಿಲ್ಲ ಎಂಬುದು ನನ್ನ ಭಾವನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ರಜತ ಮಹೋತ್ಸವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು,

ನೀವೆಲ್ಲರೂ ಕೂಡ ಕಳೆದ 4 -5 ದಶಕಗಳಿಂದ ನನ್ನನ್ನು ಬೆಂಬಲಿಸುತ್ತಾ ಬಂದಿದ್ದೀರಿ. ಆಶೀರ್ವಾದ ಮಾಡುತ್ತಾ ಬಂದಿದ್ದೀರಿ. ಅದಕ್ಕಾಗಿ ನಿಮಗೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವುದು ನನ್ನ ಮನದಾಳದ ಇಚ್ಛೆ. ನೀವು ಅಭಿನಂದನೆಗೆ ಅರ್ಹರು, ನಾನಲ್ಲ. ನಾನು ನಿಮ್ಮವನೇ, ನಿಮ್ಮಲ್ಲೇ ಒಬ್ಬನಾಗಿ ಈ ಹೋರಾಟವನ್ನು ಈಗಲೂ, ಮುಂದೆಯೂ ಮಾಡುವಂತಹ ಕೆಲಸವನ್ನು ನಾನು ಮಾಡುತ್ತೇನೆ ಎಂದು ಹೇಳಿದರು.

ನಾನು ಹಿಂದುಳಿದ ಜಾತಿಗೆ ಸೇರಿದವನು ಎಂದು ಹೇಳಲು ಯಾವುದೇ ಮುಜುಗರವಿಲ್ಲ. ಯಾಕೆಂದರೆ ಈ ದೇಶದಲ್ಲಿ ಬಹಳ ವರ್ಷಗಳ ಕಾಲ ಜಾತಿ ವ್ಯವಸ್ಥೆಯಿತ್ತು, ಬ್ರಾಹ್ಮಣ, ಕ್ಷತ್ರಿಯ, ವೈಶ್ಯ ಶೂದ್ರ ಎಂಬ ವರ್ಣ ವ್ಯವಸ್ಥೆಯಿತ್ತು. ನಾನು ಶೂದ್ರಕ್ಕೆ ಸೇರಿದವನು. ಲಿಂಗಾಯತ, ಒಕ್ಕಲಿಗ ಆದಿಯಾಗಿ ನಾವೆಲ್ಲರೂ ಕೂಡ ಶೂದ್ರರೆ. ವರ್ಣ ವ್ಯವಸ್ಥೆಯಲ್ಲಿ ಮೇಲಿನ ಮೂರು ಜಾತಿಗಳಿಗೆ ಅವಕಾಶಗಳಿದ್ದವು. ಆದರೆ ಶೂದ್ರರಿಗೆ ಅವಕಾಶಗಳು ಸಿಗಲಿಲ್ಲ. ಎಲ್ಲರಿಗೂ ಸಮಾನ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದರೆ ಈ ಸಮಾಜದಲ್ಲಿ ಅಸಮಾನತೆ ನಿರ್ಮಾಣ ಆಗಲು ಸಾಧ್ಯವಾಗುತ್ತಿರಲಿಲ್ಲ. ಶೂದ್ರ ವರ್ಗದ ಜನರು ಅಕ್ಷರ ಸಂಸ್ಕೃತಿಯಿಂದ, ಅವಕಾಶಗಳಿಂದ ವಂಚಿತರಾಗುತ್ತಿರಲಿಲ್ಲ ಎಂದು ಹೇಳಿದರು.

ನಾನು ವಿದ್ಯಾರ್ಥಿ ದೆಸೆಯಿಂದಲೂ ಈ ಅಸಮಾನತೆಯ ವಿರುದ್ಧ ಹೋರಾಡುತ್ತಾ ಬಂದಿದ್ದೇನೆ. ನಾನು ಬಹಳ ಕಷ್ಟಪಟ್ಟು ಓದಿ, ಕಾನೂನು ಪದವಿಯನ್ನು ಪಡೆದುಕೊಂಡು, ನಂತರ ರಾಜಕಾರಣಿಯಾಗಿ ಹಿಂದುಳಿದ ಜಾತಿಗಳು, ಶೋಷಿತ ವರ್ಗಗಳು
ಹೀಗೆ ಯಾರ್ಯಾರು ಅವಕಾಶಗಳಿಂದ ವಂಚಿತರಾಗಿದ್ದಾರೆ ಅವರೆಲ್ಲರ ಪರವಾಗಿ ಹೋರಾಟ ನಡೆಸಿದೆ. ಸಾಮಾಜಿಕ ನ್ಯಾಯ ಸಿಗಬೇಕು, ಯಾರೊಬ್ಬರೂ ದೌರ್ಜನ್ಯಕ್ಕೆ ಒಳಗಾಗಬಾರದು ಎಂಬ ಉದ್ದೇಶದಿಂದ ಅಸಮಾನತೆಯ ವಿರುದ್ಧ ಧ್ವನಿ ಎತ್ತುತ್ತಾ
ಬಂದಿದ್ದೇನೆ. ಈಗಲೂ, ಮುಂದೆಯೂ ಕೂಡ ಧ್ವನಿ ಎತ್ತುತ್ತೇನೆ ಎಂದು ಹೇಳಿದರು.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles