ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಕೂಡ ಭಾರಿ ಮಳೆ: ಹವಾಮಾನ ಇಲಾಖೆ

On: July 17, 2024 9:12 AM
Follow Us:
---Advertisement---

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಇಂದು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ ಇಂದು & ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಸಹ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 19ರಿಂದ ಕರಾವಳಿ ಜಿಲ್ಲೆಗಳು ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಜುಲೈ 17 ಮತ್ತು 18ರಂದು ಭಾರೀ ಮಳೆ‌‌ಯ ಎಚ್ಚರಿಕೆಯನ್ನು ನೀಡಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು ತಲುಪುವ ಸಾಧ್ಯತೆಯಿದೆ. ಒಳನಾಡಿನ ಬೆಳಗಾವಿ ಮತ್ತು ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (40-50 ಕಿಮೀ) ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

 

 

 

Join WhatsApp

Join Now

Join Telegram

Join Now

Leave a Comment