ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲೂ ಪ್ರತ್ಯೇಕವಾಗಿ ಭಾರಿ ಮಳೆ (Rain News) ಹಾಗೂ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದ ಸ್ಥಳಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಯಾದಗಿರಿಯಲ್ಲಿ ವ್ಯಾಪಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ, ರಾಯಚೂರು ಮತ್ತು ಬೆಳಗಾವಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.