Site icon Kannada News-suddikshana

ರಾಜ್ಯಾದ್ಯಂತ ಇಂದಿನಿಂದ ಸೆ.12ರವರೆಗೆ ಗಾಳಿ ಸಹಿತ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು ಮತ್ತೆ ಸಕ್ರಿಯಗೊಂಡಿದೆ. ಈ ದಿನ ಶನಿವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆಯನ್ನು ನೀಡಿದೆ.

ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಒಳನಾಡಿನ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಭಾನುವಾರವೂ ಭಾರಿ ಮಳೆ ಎಚ್ಚರಿಕೆ ಸೆ.8ರ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಉತ್ತರ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಹಾಗೂ ಗಾಳಿ ಬೀಸಲಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Exit mobile version