ಸೆ.10ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಂಗಳವಾರ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ (40-50 kmph) ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.