ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಎರಡು ಜಿಲ್ಲೆಯ ಆಯ್ದ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.
ಉಡುಪಿ ಜಿಲ್ಲೆಯ ಮೂರು ತಾಲೂಕುಗಳಾದ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಶಾಲೆಗಳಿಗೆ ಕೂಡ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.