ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್‌ ಘೋಷಣೆ: ಹವಾಮಾನ ಇಲಾಖೆ

On: July 8, 2024 3:54 PM
Follow Us:
---Advertisement---

ಬೆಂಗಳೂರು : ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್‌ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ.

ಬದಲಾದ ಹವಾಮಾನ ವೈಪರಿತ್ಯದಿಂದ ರಾಜ್ಯ ಕರಾವಳಿಯಲ್ಲಿ ಎಡಬಿಡದೆ ನಿರಂತರ ಮಳೆ ಸುರಿಯುತ್ತಿ್ದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್‌ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ. ಎಲ್ಲಡೆ ಮಳೆ ಅಬ್ಬರ ಜೋರಾಗಿದೆ. ಕೆಲವಡೆ ನಿರಂತರ ಭಾರಿ ಮಳೆ‌ಯಾಗುತ್ತಿದ್ದು, ಅದರಲ್ಲೂ ಕರಾವಳಿ, ಮಲೆನಾಡು ಅಕ್ಷರಶಃ ತತ್ತರಿಸಿ ಹೋಗಿದೆ.

ಮಂಗಳೂರು ನಗರದಲ್ಲಿ ಸೋಮವಾರ ಮಧ್ಯಾಹ್ನ ಎಡಬಿಡದೆ ಸುರಿದ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಮಂಗಳೂರು ನಗರದ ಅನೇಕ ಕಡೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದೆ ಕೃತಕ ನೆರೆ ಭಾದಿಸಿದೆ. ಮಂಗಳೂರು ಮತ್ತು ಉಳ್ಳಾಲದಲ್ಲಿ ಎರಡು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ನದಿ ತೀರಗಳ ಪ್ರದೇಶಗಳಲ್ಲಿ ನೆರೆ ಭೀತಿ ಕಾಣಿಸಿಕೊಂಡಿದೆ. ಸಮುದ್ರ ಪ್ರಕ್ಷುಬ್ದಗೊಂಡಿದೆ. ಉಡುಪಿ ನಗರದ ಗುಂಡಿಬೈಲು, ಪಾಡಿಗಾರು, ಕರಂಬಳ್ಳಿ ಪ್ರದೇಶ, ಗುಂಡಿಬೈಲಿನ ಕೆನರಾ ಬ್ಯಾಂಕ್, ಕರಂಬಳ್ಳಿ ವೆಂಕಟರಮಣ ಲೇಔಟ್ ಬಳಿ ಭಾರಿ ಮಳೆಗೆ ರಸ್ತೆಗಳಲ್ಲಿ ಮಳೆ ನೀರು ಸಂಗ್ರಹ ಗೊಂಡು ವಾಹನ ಸವಾರರು ಪರದಾಡಿದ್ದಾರೆ. ಇನ್ನು ಕೆಲೆವೆಡೆಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ.

ಧಾರಾಕಾರ ಮಳೆ ಮುಂದುವರಿದಿರುವುದರಿಂದ ಕೆಲವೆಡೆ ತಗ್ಗು ಪ್ರದೇಶದಲ್ಲಿ ಅಂಗಡಿ ಸೇರಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದೆ. ನೀರನಲ್ಲಿ ಸಿಲುಕಿದ್ದವರನ್ನು ಪೊಲೀಸ್ ಹಾಗೂ ಅಗ್ನಿಶಾಮಕ ದಳದವರು ರಕ್ಷಣಾ ಕಾರ್ಯಾಚರಣೆ ಮಾಡಿ ಎತ್ತರ ಪ್ರದಶಕ್ಕೆ ಸ್ಥಳಾಂತರಿಸಿದ್ದಾರೆ. ಈ ಮಳೆ ಮುಂದಿನ 48 ಗಂಟೆ ವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join WhatsApp

Join Now

Join Telegram

Join Now

Leave a Comment