Home ದಾವಣಗೆರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡಿಗೆ ಕಾನೂನು ಮೂಲಕವೇ ತಿರುಗೇಟು: ಸಿಎಂ ಡಿ. ಕೆ. ಶಿವಕುಮಾರ್‌
ದಾವಣಗೆರೆನವದೆಹಲಿಬೆಂಗಳೂರು

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡಿಗೆ ಕಾನೂನು ಮೂಲಕವೇ ತಿರುಗೇಟು: ಸಿಎಂ ಡಿ. ಕೆ. ಶಿವಕುಮಾರ್‌

Share
ಸುಪ್ರೀಂ ಕೋರ್ಟ್
Share

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಹಿನ್ನೆಲೆಯಲ್ಲಿ, ರಾಜ್ಯದ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಕಾನೂನು ಚೌಕಟ್ಟಿನಲ್ಲೇ ಸೂಕ್ತ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ತಮಿಳುನಾಡು ನ್ಯಾಯಾಲಯಕ್ಕೆ ಹೋಗಿರುವ ಮಾಹಿತಿ ಬಂದಿದೆ. ಅವರ ಹಕ್ಕನ್ನು ನಾವು ಪ್ರಶ್ನೆ ಮಾಡುವುದಿಲ್ಲ. ಆದರೆ, ಕರ್ನಾಟಕ ಸರ್ಕಾರ ದೇಶದ ಕಾನೂನನ್ನು ಸಂಪೂರ್ಣವಾಗಿ ಗೌರವಿಸುತ್ತದೆ” ಎಂದರು.

ಸರ್ವಪಕ್ಷಗಳ ಬೆಂಬಲ ಹಾಗೂ ಒಗ್ಗಟ್ಟು:

ಕಾವೇರಿ ವಿಚಾರದಲ್ಲಿ ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ನಿಂತಿವೆ. ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರಕ್ಕೆ ಪೂರ್ಣ ಸಹಕಾರ ನೀಡಿವೆ. ಪ್ರಹ್ಲಾದ್ ಜೋಷಿ ಅವರ ನೇತೃತ್ವದ ಸಂಸದರ ನಿಯೋಗವು ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಹಿತರಕ್ಷಣೆಗಾಗಿ ಮನವಿ ಸಲ್ಲಿಸಿದೆ ಎಂದು ಅವರು ವಿವರಿಸಿದರು.

ಕಾವೇರಿ ಪ್ರಾಧಿಕಾರದ ಸಭೆ:

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಪ್ರತಿ 15 ದಿನಕ್ಕೊಮ್ಮೆ ಸಭೆ ಸೇರಿ ಪರಿಸ್ಥಿತಿಯನ್ನು ಪರಾಮರ್ಶಿಸಲಿವೆ. ರಾಜ್ಯದಲ್ಲಿ ಪ್ರಸ್ತುತ ಇರುವ ಕಾವೇರಿ ನೀರು ಸಂಗ್ರಹ ಹಾಗೂ ವಾಸ್ತವ ಸ್ಥಿತಿಯನ್ನು ಪ್ರಾಧಿಕಾರದ ಮುಂದೆ ಸವಿಸ್ತಾರವಾಗಿ ಮಂಡಿಸಲಾಗುವುದು. ಪ್ರಕೃತಿಯ ಕೃಪೆಯೂ ನಮ್ಮ ಮೇಲಿದ್ದು, ಕಾನೂನಿನ ವ್ಯಾಪ್ತಿಯಲ್ಲೇ ರಾಜ್ಯದ ಹಿತ ಕಾಯಲಾಗುವುದು ಎಂದು ಅವರು ಹೇಳಿದರು.

Share

Leave a comment

Leave a Reply

Your email address will not be published. Required fields are marked *

Related Articles