Home ದಾವಣಗೆರೆ 37 ವರ್ಷಗಳ ನಂತರ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ: ರಾಜಕೀಯ ಪಕ್ಷಗಳ ಬ್ಯಾನರ್‌ಗೆ ನಿಷೇಧ!
ದಾವಣಗೆರೆನವದೆಹಲಿಬೆಂಗಳೂರು

37 ವರ್ಷಗಳ ನಂತರ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ: ರಾಜಕೀಯ ಪಕ್ಷಗಳ ಬ್ಯಾನರ್‌ಗೆ ನಿಷೇಧ!

Share
ಕಾಲೇಜು
Share

ಬೆಂಗಳೂರು: ಕರ್ನಾಟಕದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯೊಂದಕ್ಕೆ ರಾಜ್ಯ ಸರ್ಕಾರ ಮುನ್ನುಡಿ ಬರೆದಿದೆ. ಕಳೆದ ೩೭ ವರ್ಷಗಳಿಂದ ನಿಷೇಧಕ್ಕೊಳಗಾಗಿದ್ದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಪುನರಾರಂಭಿಸಲು ರಾಜ್ಯ ಸಂಪುಟ ಸಭೆ ಅನುಮೋದನೆ ನೀಡಿದೆ. ೧೯೮೯ರಲ್ಲಿ ಕ್ಯಾಂಪಸ್‌ಗಳಲ್ಲಿ ನಡೆದ ಹಿಂಸಾಚಾರ ಮತ್ತು ಗಲಾಟೆಗಳ ಹಿನ್ನೆಲೆಯಲ್ಲಿ ಈ ಚುನಾವಣೆಗಳನ್ನು ನಿಷೇಧಿಸಲಾಗಿತ್ತು.

1989ರಿಂದ ಸ್ಥಗಿತಗೊಂಡಿದ್ದ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿ ಒಕ್ಕೂಟದ ಚುನಾವಣೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಆದಾಗ್ಯೂ, ಕ್ಯಾಂಪಸ್ ವಾತಾವರಣವನ್ನು ತಿಳಿಯಾಗಿಡಲು ರಾಜಕೀಯ ಪಕ್ಷಗಳ ನೇರ ಭಾಗವಹಿಸುವಿಕೆ ಹಾಗೂ ಜಾತಿ ಆಧಾರಿತ ರಾಜಕೀಯಕ್ಕೆ ಸಂಪೂರ್ಣ ತಡೆ ನೀಡಲಾಗಿದೆ.

ಸಚಿವರಾದ ಶರಣಪ್ರಕಾಶ್ ಪಾಟೀಲ್ ನೇತೃತ್ವದ ಸಂಪುಟ ಉಪಸಮಿತಿಯು ವಿವಿಧ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ ನೀಡಿದ್ದ ವರದಿಯ ಆಧಾರದ ಮೇಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಪ್ರಮುಖ ನಿಯಮಗಳು ಮತ್ತು ಸ್ವರೂಪ:

ರಾಜಕೀಯ ಪಕ್ಷಗಳ ಪ್ರವೇಶಕ್ಕಿಲ್ಲ ಅವಕಾಶ: ವಿದ್ಯಾರ್ಥಿ ಸಂಘಟನೆಗಳು ಅಥವಾ ರಾಜಕೀಯ ಪಕ್ಷಗಳ ಬ್ಯಾನರ್ ಹಾಗೂ ಚಿಹ್ನೆಗಳ ಅಡಿಯಲ್ಲಿ ಸ್ಪರ್ಧಿಸಲು ಅಥವಾ ಪ್ರಚಾರ ಮಾಡಲು ಅವಕಾಶವಿರುವುದಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳು ಆಯಾ ಕಾಲೇಜಿನ ಅಧಿಕೃತ ವಿದ್ಯಾರ್ಥಿಗಳಾಗಿರಬೇಕು.

ಸಂಘದ ಪದಾಧಿಕಾರಿಗಳ ರಚನೆ: ಪ್ರತಿ ಕಾಲೇಜಿನ ವಿದ್ಯಾರ್ಥಿ ಸಂಘವು ಒಟ್ಟು ೧೨ ಸದಸ್ಯರನ್ನು ಒಳಗೊಂಡಿರಲಿದೆ. ಇದರಲ್ಲಿ ಒಬ್ಬ ಅಧ್ಯಕ್ಷರು, ಇಬ್ಬರು ಉಪಾಧ್ಯಕ್ಷರು, ಒಬ್ಬ ಪ್ರಧಾನ ಕಾರ್ಯದರ್ಶಿ, ಇಬ್ಬರು ಜಂಟಿ ಕಾರ್ಯದರ್ಶಿಗಳು ಮತ್ತು ೬ ಮಂದಿ ಕಾರ್ಯಕಾರಿ ಸಮಿತಿ ಸದಸ್ಯರು ಇರಲಿದ್ದಾರೆ.

ಮಹಿಳೆಯರಿಗೆ ಮೀಸಲಾತಿ: ಒಟ್ಟು ಪದಾಧಿಕಾರಿಗಳ ಹುದ್ದೆಗಳಲ್ಲಿ ೪ ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. (ಒಬ್ಬ ಉಪಾಧ್ಯಕ್ಷೆ, ಒಬ್ಬ ಜಂಟಿ ಕಾರ್ಯದರ್ಶಿ ಹಾಗೂ ಇಬ್ಬರು ಕಾರ್ಯಕಾರಿ ಸಮಿತಿ ಸದಸ್ಯರು ಮಹಿಳೆಯರಾಗಿರಲಿದ್ದಾರೆ).

ಜಾತಿ ಆಧಾರಿತ ಮೀಸಲಾತಿ ಇಲ್ಲ: ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ರಾಜಕೀಯ ಬೆಳೆಯುವುದನ್ನು ತಡೆಯುವ ಉದ್ದೇಶದಿಂದ ಯಾವುದೇ ಜಾತಿ ಆಧಾರಿತ ಮೀಸಲಾತಿಯನ್ನು ನೀಡುವುದಿಲ್ಲ.

ಐಚ್ಛಿಕ ಚುನಾವಣೆ: ಈ ಚುನಾವಣೆಯನ್ನು ಕಡ್ಡಾಯಗೊಳಿಸಿಲ್ಲ. ಕಾಲೇಜಿನ ವಿದ್ಯಾರ್ಥಿಗಳು ಬಯಸಿದರೆ ಮಾತ್ರ ಚುನಾವಣೆ ನಡೆಸಲಾಗುವುದು, ಕಾಲೇಜು ಆಡಳಿತ ಮಂಡಳಿ ಇದನ್ನು ಬಲವಂತವಾಗಿ ಹೇರುವಂತಿಲ್ಲ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles