Home ಉದ್ಯೋಗ ವಾರ್ತೆ ಕರ್ನಾಟಕ ಸಾಮಾಜಿಕ ಕಲ್ಯಾಣ ವಸತಿ ಶಾಲೆ ಶಿಕ್ಷಕರ 140 ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ: ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
ಉದ್ಯೋಗ ವಾರ್ತೆದಾವಣಗೆರೆಬೆಂಗಳೂರು

ಕರ್ನಾಟಕ ಸಾಮಾಜಿಕ ಕಲ್ಯಾಣ ವಸತಿ ಶಾಲೆ ಶಿಕ್ಷಕರ 140 ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ: ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Share
ಶಿಕ್ಷಕ
Share

ಕರ್ನಾಟಕ ಪರೀಕ್ಷ ಪ್ರಾಧಿಕಾರವು (KEA) ರಾಜ್ಯ ಸರ್ಕಾರದ ಸಾಮಾಜಿಕ ಕಲ್ಯಾಣ ಇಲಾಖೆಯಡಿ ಬರುವ ವಸತಿ ಶಾಲೆಗಳಲ್ಲಿ ಖಾಲಿ ಇರುವ 140 ವಸತಿ ಶಾಲಾ ಶಿಕ್ಷಕರ (Vasati Shala Shikshakaru) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್ cetonline.karnataka.gov.in/kea ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು (Important Dates):

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21 ಆಗಸ್ಟ್ 2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಸೆಪ್ಟೆಂಬರ್ 2026

ಶುಲ್ಕ ಪಾವತಿಸಲು ಕೊನೆಯ ದಿನಾಂಕ: 19 ಸೆಪ್ಟೆಂಬರ್ 2026

ವಿದ್ಯಾರ್ಹತೆ ಮತ್ತು ವಯೋಮಿತಿ (Eligibility & Age Limit):

ವಿದ್ಯಾರ್ಹತೆ: ಅಭ್ಯರ್ಥಿಗಳು ಕನಿಷ್ಠ ಶೇ. 50 ಅಂಕಗಳೊಂದಿಗೆ ಪಿಯುಸಿ (PUC) ಹಾಗೂ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೋಮಾ ಅಥವಾ ಪದವಿ (D.El.Ed / B.El.Ed / Special Education) ಮುಗಿಸಿರಬೇಕು. ಇದರೊಂದಿಗೆ ಕರ್ನಾಟಕ ಅಥವಾ ಕೇಂದ್ರ ಸರ್ಕಾರದ TET (Teacher Eligibility Test) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವೇತನ ಶ್ರೇಣಿ: ₹41,300 ರಿಂದ ₹81,800 (ಪರಿಷ್ಕೃತ ವೇತನ ಶ್ರೇಣಿ 2024).

ವಯೋಮಿತಿ: ಕನಿಷ್ಠ 18 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಆಸಕ್ತರು ಕೊನೆಯ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗಮನಿಸಬಹುದು.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles