ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಾರ್ಚ್ 18ರಿಂದ 21ರವರೆಗೆ ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಭೇಟಿ

On: March 9, 2025 3:55 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:09-03-2025

ಶಿವಮೊಗ್ಗ: ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18 ರಿಂದ 21 ರವರೆಗೆ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು.

ಅಲ್ಲದೇ ಇದೇ ಅವಧಿಯಲ್ಲಿ ವಿವಿಧ ಸಭೆ-ಸಮಾರಂಭ, ತರಬೇತಿ ಕಾರ್ಯಾಗಾರಗಳು, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸುವರು.

ಮಾ.18ರಂದು ಸಂಜೆ 7.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಮಾ.19ರಂ ದು ಬೆಳಿಗ್ಗೆ 10.00 ರಿಂದ ಸಂಜೆ 5.00 ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು
ಸ್ವೀಕರಿಸುವರು. ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬನೆಯಾಗಿದ್ದಲ್ಲಿ ಅಥವಾ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ 1 ಮತ್ತು 2 ರಲ್ಲಿ ಲಿಖಿತವಾಗಿ ದಾಖಲೆ, ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸಬಹುದಾಗಿದೆ.

ಮಾ.20 ರಂದು ಬೆಳಿಗ್ಗೆ 11.00 ರಿಂದ 11.30 ರವರೆಗೆ ನಗರದ ಜಿಲ್ಲಾ ಪಂಚಾಯಿತಿಯ ನಜೀರ್ ಸಾಬ್ ಸಭಾಂಗಣದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ/ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಪರಿಹರಿಸುವ ಕುರಿತು ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸುತ್ತಾರೆ. ಈ ಸಮಯದಲ್ಲಿ ದೂರುದಾರರು ಮತ್ತು ಎದುರುದಾರರ ಹಾಜರಿದ್ದು ಇದರ ಸದುಪಯೋಗಪಡೆದುಕೊಳ್ಳುವಂತೆ ಶಿವಮೊಗ್ಗ ಲೋಕಾಯುಕ್ತ ಇಲಾಖೆಯ ಪೊಲೀಸ್ ಅಧೀಕ್ಷಕ ಮಂಜುನಾಥ ಚೌದರಿ. ಎಂ.ಹೆಚ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment