Site icon Kannada News-suddikshana

ರಾಜ್ಯಾದ್ಯಂತ ಕಬಾಬ್‌ ಫಿಶ್‌ ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧ: ಸರ್ಕಾರ ಆದೇಶ

ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದ್ದು ಇದರಿಂದ ಆಹಾರದಲ್ಲಿ ಕೃತಕ ಬಣ್ಣ ಬಳಕೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತ ಈ ತೀರ್ಮಾನ ಕೈಗೊಂಡಿದೆ.

ಈ ಹಿಂದೆ ಕಾಟನ್ ಕ್ಯಾಂಡಿ, ಗೋಬಿಗೆ ಕೃತಕ ಬಣ್ಣ ಬಳಕೆ ನಿರ್ಬಂಧಿಸಲಾಗಿತ್ತು. ಇದೀಗ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆ ಬ್ಯಾನ್ ಮಾಡಲಾಗಿದೆ. ಜನರ ಆರೋಗ್ಯ ಹಿತದೃಷ್ಟಿಯಿಂದ ಸರ್ಕಾರ ಈ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

Exit mobile version