SUDDIKSHANA KANNADA NEWS/ DAVANAGERE/ DATE:11-11-2024
ಬಳ್ಳಾರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗದವರು ಇದೇ ಡಿ.29 ರಂದು ನಡೆಸಲಿರುವ
ಕೆಎಎಸ್ ಪರೀಕ್ಷೆಗೆ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದು.
ನ.16 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯೊಳಗಾಗಿ
ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.