ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಎಚ್ಚರದಿಂದಿರುವ ಕಾಲ, ರಾಜ್ಯದ ಭದ್ರತಾ ವ್ಯವಸ್ಛೆ ಮೇಲೆ ನಿಗಾ ಇಡಿ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ!

On: May 7, 2025 12:29 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-07-05-2025

ಬೆಂಗಳೂರು: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾವೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರ ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ದ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ ಎಂದು ತಿಳಿಸಿದರು.

ಈ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್ ನಲ್ಲಿ ನಡೆದ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ. ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ ಎಂದು ಹೇಳಿದರು.

ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ ಎಂದರು.

ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ಹೇಳಿದರು.

ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್. ಭಾರತ ಸರ್ಕಾರ ಕೈಗೊಂಡಿರುವ
ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ ಎಂದರು.

ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ.
ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ ಎಂದ ಅವರು, ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದು ತಿಳಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment