Site icon Kannada News-suddikshana

ಕರ್ತವ್ಯಕ್ಕೆ ಹಾಜರಾಗಿ, ವೈದ್ಯರು, ನರ್ಸ್ ಸೇರಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವೆ ವೀಣಾ ಜಾರ್ಜ್ ಸೂಚನೆ

SUDDIKSHANA KANNADA NEWS/ DAVANAGERE/ DATE:29-10-2023

ಕೊಚ್ಚಿ: ಕೇರಳದ ಕೊಚ್ಚಿಯ ಕ್ರಿಶ್ಚಿಯನ್ ಗುಂಪಿನ ಸಮಾವೇಶ ಕೇಂದ್ರದಲ್ಲಿ ಬಾಂಬ್ ಸ್ಫೋಟ ಸಂಭವಿಸುತ್ತಿದ್ದಂತೆ ಎಚ್ಚೆತ್ತಿರುವ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಎಲ್ಲಾ ಸರ್ಕಾರಿ ಆರೋಗ್ಯ ಇಲಾಖೆಯ ಸಿಬ್ಬಂದಿ, ವೈದ್ಯರು, ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಕೇರಳದ ಕೈಗಾರಿಕಾ ಸಚಿವ ಪಿ ರಾಜೀವ್ ಅವರ ಪ್ರಕಾರ ಸ್ಫೋಟದ ಸ್ಥಳವನ್ನು ಸುತ್ತುವರಿಯಲಾಗಿದೆ ಮತ್ತು ಪೊಲೀಸರು ಮತ್ತು ಅಗ್ನಿಶಾಮಕ ರಕ್ಷಣಾ ಕಾರ್ಯಕ್ಕೆ ಒತ್ತು ನೀಡಲಾಗಿದೆ. ಘಟನೆಯ ನಂತರ ಎಲ್ಲಾ ಸರ್ಕಾರಿ ಆರೋಗ್ಯ ವೃತ್ತಿಪರರು ಕರ್ತವ್ಯಕ್ಕೆ ಹಾಜರಾಗುವಂತೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಕಲಮಸ್ಸೆರಿಯಲ್ಲಿ ಯೆಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬೆಳಗ್ಗೆ 9.40ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಮೂರು ದಿನಗಳ ಪ್ರಾರ್ಥನಾ ಸಭೆಯು ಭಾನುವಾರ ಮುಕ್ತಾಯಗೊಳ್ಳಲಿತ್ತು. ಈ ಸಮಯದಲ್ಲಿ 2,500 ಜನರ ಸಭೆ ಸೇರಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರ ತಂಡ ಸ್ಫೋಟದ ಸ್ಥಳಕ್ಕೆ ಧಾವಿಸಿ ಮೃತರ ದೇಹವನ್ನು ಹೊರತೆಗೆದರು. ಗಾಯಗೊಂಡವರನ್ನು ಕಲಮಸ್ಸೆರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಮತ್ತು ಖಾಸಗಿ  ಆಸ್ಪತ್ರೆಗೆ ದಾಖಲಿಸಲಾಗಿದೆ. ರಜೆಯಲ್ಲಿರುವ ಆರೋಗ್ಯ ಸಿಬ್ಬಂದಿಗೆ ಹಿಂತಿರುಗುವಂತೆ ಸಚಿವರು ಸೂಚನೆ ನೀಡಿದ್ದಾರೆ.

Exit mobile version