SUDDIKSHANA KANNADA NEWS/ DAVANAGERE/ DATE:25-12-2024
ಬೆಂಗಳೂರು: ಬೆಳಗಾವಿಯ ಸುವರ್ಣಸೌಧದ ವಿಧಾನ ಪರಿಷತ್ ನಲ್ಲಿ ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಆರೋಪದ ಮೇರೆಗೆ ಬಂಧಿತರಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ ಅವರನ್ನು ರಾತ್ರಿಯಿಡಿ ಕಾರಿನಲ್ಲಿ ಸುತ್ತಾಡಿಸಿದ್ದ ಖಾನಾಪುರ ಸಿಪಿಐ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಸಿಪಿಐ ಮಂಜುನಾಥ್ ನಾಯಕ್ ಅಮಾನತುಗೊಂಡ ಪೊಲೀಸ್ ಅಧಿಕಾರಿ. ಸಿ. ಟಿ. ರವಿ ಅವರನ್ನು ಖಾನಾಪುರ ಠಾಣೆಗೆ ಕರೆದೊಯ್ದು ಬಳಿಕ ರಾತ್ರಿಯಿಡಿ ಸುಮಾರು 450ರಿಂದ 500 ಕಿಲೋಮೀಟರ್ ಸುತ್ತಾಡಿಸಲಾಗಿತ್ತು. ಈ ಕೇಸ್ ಸಾಕಷ್ಟು ವಿವಾದಕ್ಕೂ ಕಾರಣವಾಗಿತ್ತು. ಐಜಿಪಿ ವಿಕಾಸ್ ಕುಮಾರ್ ಅವರು ಆದೇಶ ಹೊರಡಿಸಿ ಈಗ ಖಾನಾಪುರ ಸಿಪಿಐ ಅವರನ್ನು ಅಮಾನತುಗೊಳಿಸಲಾಗಿದೆ.
ಬಿಜೆಪಿ ನಾಯಕರನ್ನು ಠಾಣೆಯೊಳಗೆ ಕೂರಿಸಿಕೊಂಡು ಸಭೆ ನಡೆಸಲು ಅನುವು ಮಾಡಿಕೊಟ್ಟ ಆರೋಪ ಖಾನಾಪುರ ಸಿಪಿಐ ಮೇಲಿತ್ತು. ಬಿಜೆಪಿ ನಾಯಕರು ಸಭೆ ನಡೆಸಿದ್ದು ಸಿಎಂ, ಡಿಸಿಎಂ ಹಾಗೂ ಸಚಿವರ ಕೆಂಗಣ್ಣಿಗೂ ಗುರಿಯಾಗಿತ್ತು.
ಆಯುಕ್ತ ಯಡಾ ಮಾರ್ಟಿನ್, ಐಜಿಪಿ ವಿಕಾಸ್ ಕುಮಾರ್ ಅವರು ಸಭೆ ನಡೆಸಿ ಈಗ ಮಂಜುನಾಥ್ ನಾಯಕ್ ಅವರನ್ನು ಸಸ್ಪೆಂಡ್ ಮಾಡಲು ನಿರ್ಧರಿಸಿ, ಅಮಾನತುಗೊಳಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಿಪಿಐ ಮಂಜುನಾಥ್ ನಾಯಕ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಕೇಂದ್ರ ಸಚಿವ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್. ಅಶೋಕ ಸೇರಿದಂತೆ
ಎಲ್ಲಾ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು.