SUDDIKSHANA KANNADA NEWS/ DAVANAGERE/ DATE:04-03-2025
ಬೆಂಗಳೂರು: ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ ಸಾಕಷ್ಟು ಗರಿಗೆದರಿದೆ. ನವೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ತಾನದಿಂದ ಕೆಳಗಿಳಿಯುತ್ತಾರೆ ಎಂಬ ಗುಸುಗುಸು ಜೋರಾಗಿದೆ.
ಈ ನಡುವೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಒಡಂಬಡಿಕೆಯಂತೆ ಡಿ. ಕೆ. ಶಿವಕುಮಾರ್ ಸಿಎಂ ಆಗ್ತಾರೆ ಎಂಬ ಹೇಳಿಕೆ ನೀಡಿರುವ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಬೆಳವಣಿಗೆ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಡಿಕೆಶಿ ಭೇಟಿ ಮಾಡಿರುವುದು ಕುತೂಹಲ ಹೆಚ್ಚಾಗುವಂತೆ ಮಾಡಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗುತ್ತಾರೆ ಎಂದು ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಹೇಳಿಕೆ ನೀಡುತ್ತಿದ್ದಂತೆ ಮೂಲ ಕಾಂಗ್ರೆಸ್ಸಿಗರು ಅಲರ್ಟ್ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯರ ಬಣದಲ್ಲಿ ಬಹುತೇಕರು ವಲಸಿಗರೇ ಇದ್ದಾರೆ. ಹಾಗಾಗಿ, ವೀರಪ್ಪ ಮೊಯ್ಲಿ ಕೇಂದ್ರ ಸಚಿವರಾಗಿ, ಎಐಸಿಸಿ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದರು. ಇಂಥ ನಾಯಕನ ಮಾತಿನಲ್ಲಿ ಸಿಎಂ ಬದಲಾವಣೆ ಆಗೋದು ಖಚಿತ ಎಂಬ ಮಾತು ಬಂದಿರುವುದರಿಂದ ಸಹಜವಾಗಿಯೇ ಚರ್ಚೆ ಹುಟ್ಟು ಹಾಕಿದೆ.
ಈ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಡಿಕೆಶಿ ಸೈಲೆಂಟ್ ಆಗಿದ್ದರು. ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ನೀವು ಹೇಳಿದಂತೆ ನಾನು ಇಷ್ಟು ದಿನಗಳವರೆಗೆ ಸುಮ್ಮನಿದ್ದೆ. ನಿಮ್ಮ ಮಾತು ಕೇಳಿದ್ದೇನೆ, ಹೈಕಮಾಂಡ್ ಸೂಚನೆ ಪಾಲಿಸಿದ್ದೇನೆ. ಸಿದ್ದರಾಮಯ್ಯರ ಬಣ ವಿನಾಕಾರಣ ಗೊಂದಲ ಮೂಡಿಸುತ್ತಿದೆ. ಖಡಕ್ ಸಂದೇಶ ನೀಡುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಲ್ಲಿಕಾರ್ಜುನ್ ಖರ್ಗೆ ಅವರು ಸದ್ಯಕ್ಕೆ ತಾಳ್ಮೆ ವಹಿಸಿ. ಎರಡೂವರೆ ವರ್ಷ ಆಗಲಿ, ಆಗ ಮಾತನಾಡೋಣ ಎಂದು ಹೇಳಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಕಾಂಗ್ರೆಸ್ ನಲ್ಲಿ ಖುರ್ಚಿ ಕಾದಾಟ ಮತ್ತಷ್ಟು ಗಂಭೀರ ಸ್ವರೂಪ ಪಡೆಯುವ ಸಾಧ್ಯತೆ ಇದೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನಗಳನ್ನು ಪಾಲಿಸುವುದಾಗಿ ಸ್ಪಷ್ಟಪಡಿಸಿದರು.