Site icon Kannada News-suddikshana

ಖೋ ಖೋ ಪಂದ್ಯಾವಳಿ ಯಶಸ್ವಿ: ಎಸ್. ಎಸ್. ಮಲ್ಲಿಕಾರ್ಜುನ್ ಗೆ ಸನ್ಮಾನ

ಎಸ್. ಎಸ್. ಮಲ್ಲಿಕಾರ್ಜುನ್

ದಾವಣಗೆರೆ: ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 31ನೇ ದಕ್ಷಿಣ ಭಾರತ ಪುರುಷ ಮತ್ತು ಮಹಿಳೆಯರ ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿ ಯಶಸ್ವಿಯಾಗಿ ಸಂಪನ್ನಗೊಂಡಿತು. ಪಂದ್ಯಾವಳಿ ಯಶಸ್ವಿ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. 

READ ALSO THIS STORY: ದಾವಣಗೆರೆ ಸಿದ್ಧಗಂಗಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಗಿರೀಶ್ ಆರ್. ನೇಸರ್ಗಿ ಅದ್ವಿತೀಯ ಸಾಧನೆ

ಭಾರತೀಯ ಖೋ ಖೋ ಸಂಸ್ಥೆ ದೆಹಲಿ, ದಕ್ಷಿಣ ಭಾರತ ಖೋ ಖೋ ಕಮಿಟಿ, ಕರ್ನಾಟಕ ರಾಜ್ಯ ಖೋ ಖೋ ಸಂಸ್ಥೆ ಬೆಂಗಳೂರು ಹಾಗೂ ದಾವಣಗೆರೆ ಜಿಲ್ಲಾ ಖೋ ಖೋ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಈ ಪಂದ್ಯಾವಳಿಯನ್ನು ಸಂಘಟಿಸಲಾಗಿತ್ತು.

ಪಂದ್ಯಾವಳಿಯನ್ನು ಯಶಸ್ವಿಯಾಗಿ ನಡೆಸಲು ಸಂಪೂರ್ಣ ಸಹಕಾರ ನೀಡಿದ ಸಚಿವ ಮಲ್ಲಿಕಾರ್ಜುನ್ ಅವರನ್ನು ಕರ್ನಾಟಕ ರಾಜ್ಯ ಖೋ ಖೋ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜೆ. ರಾಮಲಿಂಗಪ್ಪ, ಜಿಲ್ಲಾ ಖೋ ಖೋ ಸಂಸ್ಥೆಯ ಸಹ ಕಾರ್ಯದರ್ಶಿ ಹೆಚ್.ಎಂ. ರಘು, ನಿರ್ದೇಶಕ ಹೆಚ್.ಎನ್. ಕೊಟ್ರೇಶ್, ಹಿರಿಯ ಕಬಡ್ಡಿ ಆಟಗಾರ ಮಲ್ಲಿಕಾರ್ಜುನ್ ಹಾಗೂ ಮೊಸಿನ್ ಅವರು ಗೌರವಪೂರ್ವಕವಾಗಿ ಸನ್ಮಾನಿಸಿದರು.

Exit mobile version