Site icon Kannada News-suddikshana

KHPT Recruitment 2024: ರಾಜ್ಯ ಸರ್ಕಾರಿ ಹುದ್ದೆಗಳಿಗೆ ಅಪ್ಲೈ ಮಾಡಲು ನಾಳೆಯೇ ಕೊನೆಯ ದಿನ

KHPT Recruitment 2024: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕ್ವಾಲಿಟೇಟಿವ್ ರಿಸರ್ಚ್​ ಅಸೋಸಿಯೇಟ್​​​(Qualitative Research Associate) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಆನ್​​ಲೈನ್(Online)​ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್(Application) ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮೇ 12, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಫಿಲ್​, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅನುಭವ:
ಅಭ್ಯರ್ಥಿಗಳು ಸಮಾಜಶಾಸ್ತ್ರ, ಮಾನವಶಾಸ್ತ್ರ, ಸಾರ್ವಜನಿಕ ಆರೋಗ್ಯ, ಅಥವಾ ಯಾವುದೇ ಸಂಬಂಧಿತ ಸಾಮಾಜಿಕ ವಿಜ್ಞಾನಗಳಲ್ಲಿ 1-2 ವರ್ಷಗಳ ಅನುಭವವನ್ನು ಹೊಂದಿರಬೇಕು.

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಆನ್​ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/05/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 12, 2024

Exit mobile version