SUDDIKSHANA KANNADA NEWS/ DAVANAGERE/ DATE-07-06-2025
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಆರೋಪಿ ಮತ್ತು ಅಪರಾಧಿಗಳಿಂದ ಕೂಡಿರುವ ಒಂದು ಪಕ್ಷವಾಗಿದೆ. ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಇದರಿಂದಾಗಿ ಮತ್ತೆ ಜೈಲಿನತ್ತ ವಿನಯ್ ಕುಲಕರ್ಣಿ ಹೆಜ್ಜೆ ಇಟ್ಟಿದ್ದಾರೆ ಎಂದು ಬಿಜೆಪಿ ಹೇಳಿದೆ.
ಕೊಲೆ ಮಾಡಿಸಿದ್ದೇ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಎಂದು ಆತನ ಆಪ್ತನೇ ಆದ ಬಸವರಾಜ ಮುತ್ತಗಿ ಕೋರ್ಟ್‌ನಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಸಿಬಿಐ ಮನವಿ ಪುರಸ್ಕರಿಸುವ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದೆ ಎಂದು ಹೇಳಿದೆ.
ಒಟ್ಟಿನಲ್ಲಿ ರಾಜ್ಯದಲ್ಲಿ ಕೊಲೆ, ಬೆದರಿಕೆ, ಆತ್ಮಹತ್ಯೆಗೆ ಸುಪಾರಿ ನೀಡುವ ಮುಖ್ಯ ಕಚೇರಿ ಕಾಂಗ್ರೆಸ್ ಆಗಿದೆ ಎಂದು ಬಿಜೆಪಿ ಆರೋಪಿಸಿದೆ.