(KIOCL Recruitment) ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ:
ಕಂಪನಿ ಸೆಕ್ರೆಟರಿ
ವಿದ್ಯಾರ್ಹತೆ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪನಿ ಸೆಕ್ರೆಟರಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 30, 2024ಕ್ಕೆ ಗರಿಷ್ಠ 48 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
1,00,000- 2,60,000
ಉದ್ಯೋಗದ ಸ್ಥಳ:
ಬೆಂಗಳೂರು
ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿಯನ್ನು ಕಳುಹಿಸಲು ಆಫ್‌ಲೈನ್ ವಿಳಾಸ:
ಮುಖ್ಯ ಜನರಲ್ ಮ್ಯಾನೇಜರ್ (HR & Admin)
HR ಇಲಾಖೆ
KIOCL ಲಿಮಿಟೆಡ್
ಕೋರಮಂಗಲ 2ನೇ ಬ್ಲಾಕ್
ಸರ್ಜಾಪುರ ರಸ್ತೆ
ಬೆಂಗಳೂರು-560 034
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜುಲೈ 25 2024