ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶ, ಬಿಹಾರ ಪ್ರವಾಸ ಕೈಗೊಳ್ಳಲಿದ್ದಾರೆ. ಉ.ಪ್ರ.ದಲ್ಲಿರುವ ಪ್ರಧಾನಿ ಪ್ರತಿನಿಧಿಸುವ ವಾರಾಣಸಿ ಲೋಕಸಭಾ ಕ್ಷೇತ್ರಕ್ಕೆ ಫಲಿತಾಂಶ ಪ್ರಕಟವಾದ ಬಳಿಕ, 3ನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಮೋದಿ ಭೇಟಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಅವರು 9.26 ಕೋಟಿ ರೈತರಿಗೆ 17ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲಿದ್ದಾರೆ. ಇದುವರೆಗೆ 11 ಕೋಟಿ ಅರ್ಹ ರೈತರಿಗೆ ಯೋಜನೆಯಡಿ 3.04 ಲಕ್ಷ ಕೋಟಿ ರೂ. ಮೊತ್ತವನ್ನು ವರ್ಗಾಯಿಸಲಾಗಿದೆ. ಕಾಶಿ ವಿಶ್ವನಾಥ ದೇಗುಲದಲ್ಲಿ ಪ್ರಧಾನಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.