Home ಕ್ರೈಂ ನ್ಯೂಸ್ ಕೋಲ್ಕತ್ತಾ ದುರ್ಗಾಪೂಜಾ ಪಂಡಾಲ್‌ನಲ್ಲಿ ಕಾಲ್ತುಳಿತ: 19 ಸಾವು, ಸಂಘಟಕರು ಸೇರಿ 7 ಜನರ ಬಂಧನ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ಕೋಲ್ಕತ್ತಾ ದುರ್ಗಾಪೂಜಾ ಪಂಡಾಲ್‌ನಲ್ಲಿ ಕಾಲ್ತುಳಿತ: 19 ಸಾವು, ಸಂಘಟಕರು ಸೇರಿ 7 ಜನರ ಬಂಧನ!

Share
ಕೋಲ್ಕತ್ತಾ
Share

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಚೋರ್‌ಬಾಗನ್ ದುರ್ಗಾಪೂಜಾ ಪಂಡಾಲ್‌ನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ 19 ಜನರು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಭಾರೀ ಜನಸಂದಣಿ ಮತ್ತು ಮಳೆಯ ನಡುವೆ ತಾತ್ಕಾಲಿಕ ಮಂಟಪದ ಒಂದು ಭಾಗ ಕುಸಿದು ಬಿದ್ದಿದ್ದೇ ಈ ದುರಂತಕ್ಕೆ ಮುಖ್ಯ ಕಾರಣ ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆಯೋಜಕ ಸಮಿತಿಯ ಸದಸ್ಯರು ಸೇರಿದಂತೆ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ದುರಂತದ ಬೆನ್ನಲ್ಲೇ ಚೋರ್‌ಬಾಗನ್ ದುರ್ಗಾಪೂಜಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಂತ ಬ್ಯಾನರ್ಜಿ ಹಾಗೂ ಇತರ ಪದಾಧಿಕಾರಿಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ದುರಂತದಲ್ಲಿ ಗಾಯಗೊಂಡವರನ್ನು ಕಲ್ಕತ್ತಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸ್, ಅಗ್ನಿಶಾಮಕ ದಳ ಹಾಗೂ ವಿಪತ್ತು ನಿರ್ವಹಣಾ ಪಡೆಗಳು ಧಾವಿಸಿ ಪಂಡಾಲ್ ಅನ್ನು ಸಾರ್ವಜನಿಕರಿಗೆ ಬಂದ್ ಮಾಡಿವೆ. ಕಿರಿದಾದ ನಿರ್ಗಮನ ದ್ವಾರಗಳು, ಸೂಕ್ತ ಬೆಳಕಿನ ವ್ಯವಸ್ಥೆ ಇಲ್ಲದಿರುವುದು ಮತ್ತು ಸೂಕ್ತ ಜನಸಂದಣಿ ನಿಯಂತ್ರಣ ಕೊರತೆಯೇ ಈ ಅನಾಹುತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

ವಿಶೇಷ ತನಿಖಾ ತಂಡ (SIT): ಕಲ್ಕತ್ತಾ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್‌ಐಟಿ ತನಿಖೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂಧು ಅಧಿಕಾರಿ ಆದೇಶಿಸಿದ್ದಾರೆ.

ಪರಿಹಾರ ಘೋಷಣೆ: ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ₹25 ಲಕ್ಷ ಹಾಗೂ ಸರ್ಕಾರಿ ಕೆಲಸ ಮತ್ತು ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ₹2 ಲಕ್ಷ ಎಕ್ಸ್‌ಗ್ರೇಷಿಯಾ ಘೋಷಿಸಲಾಗಿದೆ. ಗಾಯಾಳುಗಳಿಗೆ ರಾಜ್ಯದಿಂದ ₹5 ಲಕ್ಷ ಹಾಗೂ ಉಚಿತ ಚಿಕಿತ್ಸೆ ಮತ್ತು ಕೇಂದ್ರದಿಂದ ₹50,000 ನೆರವು ನೀಡಲಾಗುವುದು.

ಸಹಾಯವಾಣಿ ಆರಂಭ: ಸಂತ್ರಸ್ತರು ಹಾಗೂ ಸಾರ್ವಜನಿಕರ ನೆರವಿಗಾಗಿ ರಾಜ್ಯ ಸರ್ಕಾರವು ಟೋಲ್-ಫ್ರೀ ಸಹಾಯವಾಣಿ 18003455678 ಅನ್ನು ಪ್ರಾರಂಭಿಸಿದೆ.

ಈ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಹಿರಿಯ ರಾಜಕೀಯ ನಾಯಕರು ತೀವ್ರ ಕಂಬನಿ ಮಿಡಿದಿದ್ದಾರೆ. ಮುನ್ನೆಚ್ಚರಿಕೆ ವಹಿಸದ ಕೋಲ್ಕತ್ತಾ ಪೊಲೀಸ್ ಮತ್ತು ಬಿಜೆಪಿ ಆಡಳಿತದ ವೈಫಲ್ಯವನ್ನು ತೃಣಮೂಲ ಕಾಂಗ್ರೆಸ್ (TMC) ತೀವ್ರವಾಗಿ ಪ್ರಶ್ನಿಸಿದೆ.

Share

Leave a comment

Leave a Reply

Your email address will not be published. Required fields are marked *