SUDDIKSHANA KANNADA NEWS/ DAVANAGERE/ DATE:12-03-2025
ಬೆಂಗಳೂರು: ಕೆಪಿಎಸ್ ಸಿ ಪರೀಕ್ಷೆಯಲ್ಲಿ ಲೋಪ ಆಗಿದ್ದು, ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ಹೇಳಿದರು.
ತಪ್ಪು ಭಾಷಾಂತರದಿಂದ ಅನ್ಯಾಯಕ್ಕೆ ಒಳಗಾದವರ ಪರವಾಗಿ ನಾವಿದ್ದೇವೆ. ಯುಪಿಎಸ್ ಸಿ ಮಾದರಿಯಲ್ಲಿ ಕೆಪಿಎಸ್ ಸಿ ಪರೀಕ್ಷೆ, ನೇಮಕಾತಿ ನಡೆಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.
ಕೆಪಿಎಸ್ ಸಿ ಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಆದ ಲೋಪದ ಕಾರಣಕ್ಕೆ ಅಭ್ಯರ್ಥಿಗಳಿಗೆ ಆಗಿರುವ ಸಮಸ್ಯೆ ಬಗ್ಗೆ ವಿರೋಧ ಪಕ್ಷದ ನಿಲುವಳಿ ಸೂಚನೆ ಮೇಲೆ ಕೆಪಿಎಸ್ಸಿ ಕುರಿತ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಉತ್ತರ ನೀಡಿದರು.