SUDDIKSHANA KANNADA NEWS/ DAVANAGERE/ DATE:12-03-2025
ಬೆಂಗಳೂರು: ಕೆಪಿಎಸ್ ಸಿ ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಈಗ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕೆಪಿಎಸ್ ಸಿ ಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಆದ ಲೋಪದ ಕಾರಣಕ್ಕೆ ಅಭ್ಯರ್ಥಿಗಳಿಗೆ ಆಗಿರುವ ಸಮಸ್ಯೆ ಬಗ್ಗೆ ವಿರೋಧ ಪಕ್ಷದ ನಿಲುವಳಿ ಸೂಚನೆ ಮೇಲೆ ಕೆಪಿಎಸ್ಸಿ ಕುರಿತ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಉತ್ತರ ನೀಡಿದ ಅವರು, ಪ್ರಕರಣ ನ್ಯಾಯಾಲಯದಲ್ಲಿದೆ: ಮರು ಪರೀಕ್ಷೆಗೆ ನ್ಯಾಯಾಲಯ ಸೂಚನೆ ಕೊಟ್ಟರೆ ಮರು ಪರೀಕ್ಷೆ ನಡೆಸಲಾಗುವುದು. ಮರು ಪರೀಕ್ಷೆ ಬಗ್ಗೆ ಕೋರ್ಟ್ ಸೂಚನೆ ಬರದಿದ್ದರೆ ಸರ್ವ ಪಕ್ಷ ಸಭೆ ಕರೆದು ಚರ್ಚಿಸಲಾಗುವುದು ಎಂದು ತಿಳಿಸಿದರು.
ಏನೇ ಆದರೂ ಈಗ ಪ್ರಕರಣವು ಉಚ್ಛ ನ್ಯಾಯಾಲಯ ಹಾಗೂ ಕೆಎಟಿಗಳು ನೀಡುವ ಆದೇಶಗಳನ್ನು ಆಧರಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು. ಈ ವಿಚಾರದಲ್ಲಿ ಯಾವುದೇ ಮುಲಾಜುಗಳು ಸರ್ಕಾರಕ್ಕಿಲ್ಲ ಎಂಬುದನ್ನು ಸದನಕ್ಕೆ ತಿಳಿಸಬಯಸುತ್ತೇನೆ ಎಂದು ಹೇಳಿದ್ದಾರೆ.