ಬೆಂಗಳೂರು: KPSC ಹಗರಣ ಹಾಗೂ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ ನಮ್ಮ ಸರ್ಕಾರ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ. ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುವ ಅಧಿಕಾರ ಯಾರಿಗೂ ಇಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಾನೂನಿನ ಮುಂದೆ ಎಲ್ಲರೂ ಒಂದೇ. ‘ಉಪ್ಪು ತಿಂದವರು ನೀರು ಕುಡಿಯಲೇಬೇಕು’. ಅದು KPSC ಅಧ್ಯಕ್ಷರೇ ಇರಲಿ, ಕಂಟ್ರೋಲರ್ ಆಗಿರಲಿ, ಐಎಎಸ್ ಅಧಿಕಾರಿಯಾಗಿರಲಿ ಅಥವಾ ಯಾವುದೇ ಸಿಬ್ಬಂದಿಯಾಗಿರಲಿ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಥವಾ ಯಾವುದೇ ತನಿಖಾ ಸಂಸ್ಥೆಗಳಿಗೆ ಅಗತ್ಯವಿರುವ ಸಂಪೂರ್ಣ ಸಹಕಾರವನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದು ತಿಳಿಸಿದರು.
ಲಕ್ಷಾಂತರ ಯುವಕರ ನಿರೀಕ್ಷೆಗೆ ತಕ್ಕಂತೆ ಪಾರದರ್ಶಕವಾಗಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನಾವು ಬದ್ಧರಾಗಿದ್ದೇವೆ. ಈ ನೇಮಕಾತಿ ಪ್ರಕ್ರಿಯೆಗೆ ಅಡ್ಡಿಪಡಿಸುವ ಅಥವಾ ದುರುದ್ದೇಶದಿಂದ ಅಕ್ರಮ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.ಯುವಜನರ ನಂಬಿಕೆಯನ್ನು ಕಾಯುವುದು ಹಾಗೂ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ ಎಂದು ಪ್ರತಿಪಾದಿಸಿದ್ದಾರೆ.





Leave a comment