(krishi bhagya scheme:) ರೈತರನ್ನು ಉತ್ತೇಜಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಬದು, ಕೃಷಿ ಹೊಂಡ, ಕೃಷಿಹೊಂಡದ ಸುತ್ತ ತಂತಿ ಬೇಲಿ, ಕೃಷಿಹೊಂಡಕ್ಕೆ ಪಾಲೀಥಿನ್ ಹೊದಿಕೆ, ಪಂಪ್ ಸೆಟ್ ಹಾಗೂ ಲಘು ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಹಾಯಧನ ನೀಡಲಾಗುತ್ತಿದೆ.
ಎಷ್ಟು ಸಹಾಯಧನ ಲಭ್ಯ:
ರೈತರು ಈ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕಾಗಿರುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ.90% ಸಹಾಯಧನ ನೀಡಲು ಅವಕಾಶವಿರುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ದಾಖಲೆಗಳು ಯಾವುದು?;
- ಪಾಸ್ ಪೋರ್ಟ್ ಸೈಜ್ ಫೋಟೊ
- ಪಹಣಿ
- ಜಾತಿ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ