Site icon Kannada News-suddikshana

ರೈತರಿಗೆ ಭರ್ಜರಿ ಸಿಹಿ ಸುದ್ದಿ : ಒಂದು ವಾರದೊಳಗೆ ಬೆಳೆ ಪರಿಹಾರ ವಿತರಣೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಕೃಷ್ಣಬೈರೇಗೌಡ

ರಾಜ್ಯದಲ್ಲಿ ಬಿಡದೇ ಸುರಿಯುತ್ತಿರುವ ಮಳೆಯಿಂದ ಬೆಳೆ ಹಾನಿಯಾಗಿದ್ದು, ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಆದ್ರೆ, ಇದೀಗ ಅನ್ನದಾತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದ್ದು, ಸಚಿವ ಕೃಷ್ಣಬೈರೇಗೌಡ ಅವರು ರೈತರಿಗೆ ವಾರದೊಳಗೆ
ಪರಿಹಾರ ವಿತರಣೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಈ ಬಾರಿ 32% ಹೆಚ್ಚು ಮಳೆಯಾಗಿದ್ದು, 61,700 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಮಳೆ ಸಂಬಂಧಿ ದುರಂತದಲ್ಲಿ 58 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

Exit mobile version