ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್ ಆಪರೇಷನ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಕಠಿಣ ಕ್ರಮ ಕೈಗೊಂಡಿದೆ.
ಪಕ್ಷದ ನಾಯಕರ ವಿರುದ್ಧ ನಡೆಸಿರುವ ಷಡ್ಯಂತ್ರ ಹಾಗೂ ಪಕ್ಷವಿರೋಧಿ ಚಟುವಟಿಕೆಯ ಆರೋಪದ ಮೇಲೆ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಕೃಪಾ ಆಳ್ವಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಕಾಂಗ್ರೆಸ್ನ ಮೂಲ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.
ತಮ್ಮ ತೇಜೋವಧೆ ಮಾಡುವ ಉದ್ದೇಶದಿಂದ ಹಣೆದ ತಪ್ಪು ವಿಡಿಯೋ ಹಾಗೂ ಬ್ಲ್ಯಾಕ್ಮೇಲ್ ತಂತ್ರದ ಹಿಂದೆ ಕೃಪಾ ಆಳ್ವಾ ಹಸ್ತವಿದೆ ಎಂದು ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದರು. ಅಲ್ಲದೆ ಈ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್ನಿಂದ ತಡೆಯಾಜ್ಞೆ (Injunction) ತಂದಿದ್ದರು. ಮತ್ತೊಂದೆಡೆ, ಈ ಕುರಿತು ತನಿಖೆ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸರು, ವಿಡಿಯೋದಲ್ಲಿ ಮಾಡಲಾಗಿರುವ ಲೈಂಗಿಕ ಶೋಷಣೆ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ಯೋಜಿತವಾಗಿ ರೂಪಿಸಿದ ಕಟ್ಟುಕಥೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.





Leave a comment