SUDDIKSHANA KANNADA NEWS/ DAVANAGERE/ DATE:12-03-2025
ದಾವಣಗೆರೆ: ಮಾರ್ಚ್ 15 ರಿಂದ 17 ರವರೆಗೆ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿಯಲ್ಲಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ದಾವಣಗೆರೆ ವಿಭಾಗದ ಕೆ ಎಸ್ ಆರ್ ಟಿ ಸಿ ಡಿಪೋದಿಂದ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ಭಕ್ತಾಧಿಗಳ ಅನುಕೂಲಕ್ಕಾಗಿ 65 ಬಸ್ಗಳು ಕಾರ್ಯಚರಣೆ ಮಾಡಲಿವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಕಿರಣಕುಮಾರ ಎಫ್. ಬಸಾಪುರ ತಿಳಿಸಿದ್ದಾರೆ.