Site icon Kannada News-suddikshana

ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಶೀಘ್ರ ಹೆಚ್ಚಳ ಸಾಧ್ಯತೆ

ಶೀಘ್ರದಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಟಿಕೆಟ್‌ ದರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.  ಡೀಸೆಲ್‌, ಬಿಡಿಭಾಗಗಳು ಮತ್ತು ಇತರ ಬಿಡಿಭಾಗಗಳ ಬೆಲೆ ಏರಿಕೆಯಾಗಿದೆ. ಜತೆಗೆ, ನೌಕರರ ವೇತನವೂ ಹೆಚ್ಚಾಗಿದೆ.

ಹೀಗಾಗಿ ಬಸ್‌ಗಳ ನಿರ್ವಹಣಾ ವೆಚ್ಚ ಹೆಚ್ಚಾಗಿದೆ. ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವ ಶಕ್ತಿ ಯೋಜನೆ ಜಾರಿಯಾದ ನಂತರ ರಾಜ್ಯ ಸರ್ಕಾರದಿಂದ ಯಾವುದೇ ವಿಶೇಷ ಅನುದಾನವೂ ದೊರೆತಿಲ್ಲ. ಈ ಕಾರಣಗಳಿಂದ ಬಸ್‌ ಟಿಕೆಟ್‌ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ.

Exit mobile version