SUDDIKSHANA KANNADA NEWS/ DAVANAGERE/ DATE:13-03-2025
ಬೆಂಗಳೂರು: ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಿದ್ದು, ಪ್ರತಿ ಕ್ವಿಂಟಾಲ್ ಗೆ ₹5,940 ನಿಗದಿಪಡಿಸಲಾಗಿದೆ.
ಪ್ರತಿ ಎಕರೆಗೆ 5 ಕ್ವಿಂಟಾಲ್ ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ತಿಳಿಸಿದ್ದಾರೆ.
ಖರೀದಿ ಪ್ರಕ್ರಿಯೆ ನಂತರ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಲಾಗುವುದು. ರೈತರು ತಮ್ಮ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ
ಸಹಕಾರ ಸಂಘಗಳಲ್ಲಿ ತಮ್ಮ ಫ್ರೂಟ್ಸ್ ನ ಎಫ್ಐಡಿ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.