SUDDIKSHANA KANNADA NEWS/ DAVANAGERE/ DATE:11-12-2023
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ 2023ರ ಸಂಭ್ರಮ.
ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಪಾದಯಾತ್ರೆ ಮೂಲಕ ಶ್ರೀ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವದ ವಿವಿಧ ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಾರೆ. ಡಿಸೆಂಬರ್ 8 ರಿಂದ 12ರವರೆಗೆ ಲಕ್ಷದೀಪೋತ್ಸವ 2023ರ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಲಕ್ಷದೀಪೋತ್ಸವ 2023ರ ಸಂಭ್ರಮ ಕಣ್ತುಂಬಿಕೊಳ್ಳಲು ಮತ್ತು ದೇವರ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದೇವಾಲಯದತ್ತ ಪಾದಯಾತ್ರೆ ಮೂಲಕ ಆಗಮಿಸುತ್ತಿದ್ದಾರೆ. ಅಲ್ಲದೇ ವಾಹನಗಳಲ್ಲಿಯೂ ಸಹ ಜನರು ಆಗಮಿಸುತ್ತಿದ್ದು, ಸಂಚಾರ ದಟ್ಟಣೆ ನಿರ್ವಹಣೆ ಸಹ ಸವಾಲಾಗಿದೆ.
‘ಶೌರ್ಯ’ ತಂಡದಿಂದ ಸುಗಮ ಸಂಚಾರ ವ್ಯವಸ್ಥೆ ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇವಾಲಯದಿಂದ ಧರ್ಮಸ್ಥಳದವರೆಗಿನ ಪಾದಯಾತ್ರೆ ಸಂದರ್ಭದಲ್ಲಿ ಜನ ದಟ್ಟಣೆ ಹಾಗು ವಾಹನ ಸಂಚಾರವನ್ನು ನಿಯಂತ್ರಿಸುವಲ್ಲಿ ‘ಶೌರ್ಯ’ ವಿಪತ್ತು ನಿರ್ವಹಣಾ ತಂಡ ಯಶಸ್ವಿಯಾಗಿದೆ.