Site icon Kannada News-suddikshana

ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ನವದೆಹಲಿ: ಆರ್‌ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಲಾಲು ಪ್ರಸಾದ್ ಯಾದವ್ ಅವರು ವೈದ್ಯರ ನಿಗಾದಲ್ಲಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ. ಕುಟುಂಬದ ಸದಸ್ಯರು ಆಸ್ಪತ್ರೆಯಲ್ಲಿ ಹಾಜರಿದ್ದು, ಅವರ ಆರೈಕೆಯಲ್ಲಿ ತೊಡಗಿದ್ದಾರೆ ಎಂದು ಮೂಲಗಳಿಮದ ತಿಳಿದುಬಂದಿದೆ.

ಈ ಬಗ್ಗೆ ಪ್ರಿನ್ಸ್ ಯಾದವ್ ಅವರು ಸಾಮಾಜಿಕ ಜಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಲಾಲು ಪ್ರಸಾದ್ ಯಾದವ್ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಬಿಹಾರದ ಎಲ್ಲಾ ಜನರು ದೇವರನ್ನು ಪ್ರಾರ್ಥಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದರೊಂದಿಗೆ ಮಾಜಿ ಸಿಎಂ ಆಸ್ಪತ್ರೆಯ ಬೆಡ್‌ನಲ್ಲಿರುವ ಫೋಟೋಗಳನ್ನು ಕೂಡ ಶೇರ್ ಮಾಡಿದ್ದಾರೆ.

Exit mobile version