ಬೆಂಗಳೂರು: ಜೈಲುಗಳಲ್ಲಿ ಅವ್ಯವಸ್ಥೆ ಪ್ರಕರಣಗಳನ್ನು, ಮಾದಕ ವಸ್ತು ಜಾಲ ನಿಯಂತ್ರಣದಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಮಾದಕ ವಸ್ತು ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಂದಿನ ಅಧಿವೇಶದನಲ್ಲಿ ಹೊಸ ಕಾನೂನು ಜಾರಿಗೊಳಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಇದೇ ರೀತಿ ಸೈಬರ್ ಅಪರಾಧಗಳು ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕಿದೆ ಎಂದು ಹೇಳಿದರು.
ಕಾನೂನು ಸುವ್ಯವಸ್ಥೆ ಮತ್ತು ರಾಜ್ಯದ ಅಭಿವೃದ್ಧಿ ಪರಸ್ಪರ ಪೂರಕವಾಗಿವೆ. ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಬಂಡವಾಳ ಹೂಡಿಕೆ ಹೆಚ್ಚಾಗಿ ಅಭಿವೃದ್ಧಿ ಸಾಧಿಸಲು ಸಾಧ್ಯವಿದೆ ಎಂದು ತಿಳಿಸಿದರು.
ಪ್ರತಿಯೊಬ್ಬರಿಗೂ ರಕ್ಷಣೆ ಒದಗಿಸುವುದು, ನ್ಯಾಯ ಒದಗಿಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ, ಡಿಜಿಪಿ, ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.





Leave a comment