SUDDIKSHANA KANNADA NEWS/ DAVANAGERE/ DATE-13-05-2025
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್ ಭಯೋತ್ಪಾದಕ ಸಾವನ್ನಪ್ಪಿದ್ದು, ಮತ್ತಿಬ್ಬರು ಸಿಕ್ಕಿ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಶೋಪಿಯಾನ್ನ ಜಿನ್ಪಥರ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್ಕೌಂಟರ್ ನಂತರ ಒಬ್ಬ ಲಷ್ಕರ್-ಎ-ತೈಬಾ ಭಯೋತ್ಪಾದಕ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಇತರ ಇಬ್ಬರು ಲಷ್ಕರ್ ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎಂದು ನಂಬಲಾಗಿದೆ. ಶೋಪಿಯಾನ್ನ ಜಿನ್ಪಥರ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಒಬ್ಬ ಲಷ್ಕರ್-ಎ-ತೈಬಾ ಭಯೋತ್ಪಾದಕ ಸಾವನ್ನಪ್ಪಿದ್ದು, ಪಾಕಿ ಕುತಂತ್ರ ಮತ್ತೆ ಬಟಾಬಯಲಾಗಿದೆ. ಇತರ ಇಬ್ಬರು ಲಷ್ಕರ್ ಭಯೋತ್ಪಾದಕರು ಸಿಕ್ಕಿಬಿದ್ದಿದ್ದು, ವಿಚಾರಣೆ ಮುಂದುವರಿದಿದೆ.
ಭಾರತವು ಖಡಕ್ ಸಂದೇಶ ನೀಡಿದ್ದರೂ ಪಾಕಿಸ್ತಾನ ತನ್ನ ನರಿ ಬುದ್ದಿ ಪ್ರದರ್ಶಿಸುತ್ತಲೇ ಇದೆ. ಪರಮಾಣು ದಾಳಿ ಸೇರಿದಂತೆ ಯಾವುದಕ್ಕೂ ಹೆದರಲ್ಲ ಎಂದು ನರೇಂದ್ರ ಮೋದಿ ಅವರು ಹೇಳಿದ್ದಾರೆ. ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ರಾಜಿ ಇಲ್ಲ ಎಂದಿದ್ದಾರೆ. ಆದರೂ ಪಾಕಿಸ್ತಾನದ ಉಗ್ರರು ಒಳನುಸುಳುವ ಪ್ರಯತ್ನ ಮಾಡುತ್ತಿದ್ದು, ಭಾರತೀಯ ಸೇನೆಯು ತಕ್ಕ ಉತ್ತರ ನೀಡುತ್ತಿದೆ.