SUDDIKSHANA KANNADA NEWS/ DAVANAGERE/ DATE:21-08-2024
ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಸಲ್ಲಿಸಿರುವ ಅರ್ಜಿ ಅಂಗೀಕೃತವಾಗದ ಅಭ್ಯರ್ಥಿಗಳು ಪೂರಕ ದಾಖಲೆ ಸಲ್ಲಿಸಲು ಆ.26ರಂದು ಕೊನೆ ದಿನ.
ಇದೇ ಆಗಸ್ಟ್ 26ರೊಳಗೆ ಪೂರಕ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ತಿಳಿಸಿದೆ.
ಪ್ರಾಧಿಕಾರವು ಪೂರಕ ದಾಖಲೆಗಳನ್ನು ಪರಿಗಣಿಸಿ ಅರ್ಜಿಗಳನ್ನು ದೃಢೀಕರಿಸಲಿದೆ. ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಪರಿಶೀಲಿಸಬಹುದು.