ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

2 ತಿಂಗಳ ಬಳಿಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ: ಸಿಎಂ ಸಿದ್ದರಾಮಯ್ಯ

On: June 27, 2025 6:46 PM
Follow Us:
ಸಿದ್ದರಾಮಯ್ಯ
---Advertisement---

SUDDIKSHANA KANNADA NEWS/ DAVANAGERE/ DATE-27-06-2025

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ 2 ತಿಂಗಳ‌ ಬಳಿಕ ನೇಮಕಾತಿ‌ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯ ತಿಳಿಸಿದರು.

Read Also This Story: ಚನ್ನಗಿರಿಯ ಮುದ್ದೇನಹಳ್ಳಿಯಲ್ಲೊಂದು ವಿಲಕ್ಷಣ ಕೇಸ್: ಪುತ್ರಿ ಜೊತೆ ಮದುವೆ ಮಾಡಿಸಿದ್ದ ಅತ್ತೆ ಜೊತೆ ಅಳಿಯ ಜೂಟ್!

ಪೊಲೀಸ್ ಇಲಾಖೆಯ ಬೇಡಿಕೆಗಳಲ್ಲಿ ಬಹುತೇಕ ಈಡೇರಿಸಿ ಸಾಕಷ್ಟು ಹಣ, ಅನುದಾನ ಒದಗಿಸಿದ್ದೇನೆ. ಸಮಾಜದ ನೆಮ್ಮದಿ, ಕಾನೂನು- ಸುವ್ಯವಸ್ಥೆಯನ್ನು ನಿಮ್ಮಿಂದ ನಿರೀಕ್ಷಿಸುತ್ಯೇನೆ. ಶಕ್ತರಿಗೂ, ಅಶಕ್ತರಿಗೂ ನ್ಯಾಯ‌ ಒದಗಿಸುವುದು ಪೊಲೀಸ್ ಜವಬ್ದಾರಿ. ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದರು.

ನಾವು ಪ್ರಜಾಪ್ರಭುತ್ವ ಒಪ್ಪಿದ್ದೀವಿ. ಸಂವಿಧಾನ ಒಪ್ಪಿಕೊಂಡಿದೀವಿ. ಸಮಾಜದ ಸ್ವಾಸ್ಥ್ಯ ಕಾಪಾಡಿ, ಸಮಾಜದ ಎಲ್ಲರಿಗೂ ನ್ಯಾಯ ಕೊಡಿಸುವ ಭರವಸೆ ನೀಡಿದ್ದೀವಿ. ಇದಕ್ಕೆ ತಕ್ಕಂತೆ ನಡೆದುಕೊಳ್ಳಿ ಎಂದರು.

ಸಮಾಜದ ನೆಮ್ಮದಿ ಕಾಪಾಡಲು ಪೊಲೀಸ್ ಕಾರ್ಯಕ್ಷಮತೆ ಬಹಳ ಮುಖ್ಯ. ಇದು ಪ್ರಜಾರಾಜ್ಯ. ಅವರ ಕಷ್ಟ ಸುಖ ಕೇಳುವುದು ಪೊಲೀಸ್ ಇಲಾಖೆಯ ಜವಾಬ್ದಾರಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಗೃಹ ಇಲಾಖೆ ಎಸಿಎಸ್ ಗೌರವ್ ಗುಪ್ತ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಡಾ.ಎ.ಎಂ ಸಲೀಂ ಅವರು ಉಪಸ್ಥಿತರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment