Home ದಾವಣಗೆರೆ ಐಸಿಎಸ್‌ಇ, ಸಿಬಿಎಸ್‌ಇ, ಐಬಿಐಜಿಸಿಎಸ್‌ ಹಾಗೂ ಇನ್ನಿತರೆ ಪಠ್ಯಕ್ರಮ ಬೋಧಿಸುವ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ: ಮಧು ಬಂಗಾರಪ್ಪ
ದಾವಣಗೆರೆನವದೆಹಲಿಬೆಂಗಳೂರು

ಐಸಿಎಸ್‌ಇ, ಸಿಬಿಎಸ್‌ಇ, ಐಬಿಐಜಿಸಿಎಸ್‌ ಹಾಗೂ ಇನ್ನಿತರೆ ಪಠ್ಯಕ್ರಮ ಬೋಧಿಸುವ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ: ಮಧು ಬಂಗಾರಪ್ಪ

Share
Share

SUDDIKSHANA KANNADA NEWS/DAVANAGERE/DATE:16_12_2025

ಬೆಳಗಾವಿ: ಐಸಿಎಸ್‌ಇ, ಸಿಬಿಎಸ್‌ಇ, ಐಬಿಐಜಿಸಿಎಸ್‌ ಹಾಗೂ ಇನ್ನಿತರೆ ಪಠ್ಯಕ್ರಮ ಬೋಧಿಸುವ ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷಾ ಕಲಿಕೆಗೆ ಒತ್ತು ನೀಡಲು ರಾಜ್ಯ ಸರ್ಕಾರವು ಸೂಚಿಸಿದೆ.

ಕನ್ನಡ ಭಾಷಾ ಕಲಿಕಾ ಅಧಿನಿಯಮವನ್ನು ಪಾಲಿಸದ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಪಟ್ಟ ಉಪ ನಿರ್ದೇಶಕರು (ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿ ಮಾಡಿ, ಭಾಷಾ ಕಲಿಕಾ ಅಧಿನಿಯಮವನ್ನು ಅನುಷ್ಠಾನಗೊಳಿಸಲಾಗಿದ್ದು, ಕನ್ನಡ ಭಾಷಾ ಕಲಿಕಾ ಅಧಿನಿಯಮವನ್ನು ಪಾಲಿಸದ ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಆನೇಕಲ್ ತಾಲೂಕಿನ ದೊಮ್ಮಸಂದ್ರದ ದಿ ಬೆಂಗಳೂರು ಇಂಟೆರ್ ಶಾಲೆ ಮತ್ತು ದೊಡ್ಡಕಣ್ಣಹಳ್ಳಿಯ ಇನೋವೇಟಿವ್‌ ಶಾಲೆಯ ಮೇಲೆ ನಿಯಮಾನುಸಾರ ದಂಡ ವಿಧಿಸಲಾಗಿದೆ.

ಕನ್ನಡ ಭಾಷಾ ಕಲಿಕಾ ಅಧಿನಿಯಮ 2015ನ್ನು 2015ನೇ ಸಾಲಿನಲ್ಲಿ ಜಾರಿಗೆ ತರಲಾಗಿದ್ದು, ಕನ್ನಡ ಭಾಷಾ ಕಲಿಕಾ ನಿಯಮಗಳನ್ನು ಶಿಕ್ಷಣ ಇಲಾಖೆಯ ವತಿಯಿಂದ 2017ನೇ ಸಾಲಿನಲ್ಲಿ ರೂಪಿಸಿ ಜಾರಿಗೊಳಿಸಲಾಗಿದೆ.

ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನು ನೊಂದಣಿ ಮಾಡುವಾಗ ಕನ್ನಡ ಭಾಷಾ ಕಲಿಕಾ ಅಧಿನಿಯಮದಂತೆ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಬೋಧಿಸಲು ಇಲಾಖಾ ನಿಯಮಗಳನ್ನು ರೂಪಿಸಲಾಗಿದ್ದು, ಅದರಂತೆ ಷರತ್ತುಗಳಿಗೆ ಒಳಪಡಿಸಿ, ನೊಂದಣಿಯನ್ನು ನೀಡಲಾಗುತ್ತಿದೆ. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಮಾಡುವ ಸಂದರ್ಭದಲ್ಲಿಯೂ ಸಹ ಕನ್ನಡ ಭಾಷಾ ಕಲಿಕಾ ಅಧಿನಿಯಮದ ಷರತ್ತುಗಳಿಗೆ ಒಳಪಡಿಸಿ, ಮಾನ್ಯತೆಯನ್ನು ನೀಡಲಾಗುತ್ತಿದೆ.

ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಶಾಲೆಗಳು ಇತರೆ ಪಠ್ಯಕ್ರಮಕ್ಕೆ ಸಂಯೋಜನೆ ಹೊಂದಲು ನಿರಾಕ್ಷೇಪಣ ಪತ್ರಕ್ಕೆ ಮನವಿ ಸಲ್ಲಿಸುವಾಗ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಬೋಧಿಸುವುದಾಗಿ ಮುಚ್ಚಳಿಕೆ ಪತ್ರ ಸಲ್ಲಿಸಿ, ಕನ್ನಡ ಕಲಿಕಾ ಅಧಿನಿಯಮವನ್ನು ಪಾಲಿಸುವುದಾಗಿ ಪ್ರಮಾಣಿಕರಿಸಿದಲ್ಲಿ ಮಾತ್ರ, ಸದರಿ ಶಾಲೆಗಳಿಗೆ ಕನ್ನಡ ಭಾಷಾ ಕಲಿಕಾ ಅಧಿನಿಯಮದ ಷರತ್ತುಗಳಿಗೆ ಒಳಪಡಿಸಿ, ನಿರಾಕ್ಷೇಪಣ ಪತ್ರ ನೀಡಲಾಗುತ್ತಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎನ್‌ ರವಿಕುಮಾರ್‌ ಅವರ ಪ್ರಶ್ನೆಗೆ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರ ಉತ್ತರ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *