Site icon Kannada News-suddikshana

ಇಂದು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೀಕ್ಷಕರ ಭೇಟಿ: ಸಲಹೆ, ಸೂಚನೆ, ಆಕ್ಷೇಪಣೆಗಳಿದ್ದರೆ ತಿಳಿಸಿ

SUDDIKSHANA KANNADA NEWS/ DAVANAGERE/ DATE:16-11-2024

ದಾವಣಗೆರೆ: ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯದ ಪ್ರಗತಿ ವೀಕ್ಷಿಸಲು ತೋಟಗಾರಿಕೆ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್ ಇವರನ್ನು ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ವೀಕ್ಷಕರನ್ನಾಗಿ ನೇಮಿಸಲಾಗಿರುತ್ತದೆ.

ನವಂಬರ್ 16 ರಂದು ದಾವಣಗೆರೆಗೆ ಭೇಟಿ ನೀಡುತ್ತಿದ್ದು ಬೆಳಿಗ್ಗೆ 11 ಗಂಟೆಗೆ ಮತದಾರರ ಪಟ್ಟಿಯ ಕುರಿತು ಯಾವುದೇ ಸಲಹೆ, ಸೂಚನೆಗಳು ಹಾಗೂ ಆಕ್ಷೇಪಣೆಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರು ಇವರನ್ನು ಭೇಟಿ ಮಾಡಬಹುದೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ.

Exit mobile version