ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪ್ರತಿಯೊಬ್ಬರ ಧ್ವನಿ ಗೌರವಿಸುವ ಮನೋಭಾವ ಬೇಕು, ಪ್ರೀತಿಯ ಹೊಸ ಸುಧಾರಿತ ಸಮಾಜ ಕಟ್ಟೋಣ: ಬಾನು ಮುಷ್ತಾಕ್

On: September 22, 2025 1:45 PM
Follow Us:
ಬಾನು ಮುಷ್ತಾಕ್
---Advertisement---

SUDDIKSHANA KANNADA NEWS/ DAVANAGERE/DATE:22_09_2025

ಮೈಸೂರು: ನನ್ನ ಬದುಕು ನನಗೆ ಅನೇಕ ಪಾಠಗಳನ್ನು ಕಲಿಸಿದೆ. ಅದರಲ್ಲಿ ಮುಖ್ಯಪಾಠವೆಂದರೆ, ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ. ನನ್ನ ಧಾರ್ಮಿಕ ನಂಬಿಕೆಗಳು, ನನ್ನ ಜೀವನ ದರ್ಶನ
ಎಂದಿಗೂ ಜೀವಪರ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ತಿಳಿಸಿದರು.

READ ALSO THIS STORY: ಅಸ್ತ್ರಗಳಿಂದಲ್ಲ ಅಕ್ಷರಗಳಿಂದ ಬದುಕನ್ನು ಗೆಲ್ಲಬಹುದು, ಹಗೆಗಳಿಂದಲ್ಲ ಪ್ರೀತಿಯಿಂದ ಬದುಕು ಅರಳಿಸಬಹುದು: ಬಾನು ಮುಷ್ತಾಕ್

ಅವರು ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವುದೇ ಬದುಕಿನ ನಿಜವಾದ ದಾರಿ:

ನನ್ನ ಬದುಕು ನನಗೆ ಅನೇಕ ಪಾಠಗಳನ್ನು ಕಲಿಸಿದೆ. ಅದರಲ್ಲಿ ಮುಖ್ಯಪಾಠವೆಂದರೆ, ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ. ನನ್ನ ಧಾರ್ಮಿಕ ನಂಬಿಕೆಗಳು, ನನ್ನ ಜೀವನ ದರ್ಶನ ಎಂದಿಗೂ ಜೀವಪರ. ಅವು ಮರದ ನೆರಳಿನಂತೆ,ತಂಪಾದ ನದಿಯಂತೆ, ಇಂದಿನ ಜಗತ್ತು ಯುದ್ಧದ ಜ್ವಾಲೆಯಲ್ಲಿ ಸುಡುತ್ತಿದೆ. ಇಂದು ಮನುಕುಲವು ದ್ವೇಷ ಮತ್ತು ರಕ್ತಪಾತದಲ್ಲಿ ಮುಳುಗಿರುವಾಗ, ದಸರಾ ಘೋಷಣೆಯು ಎಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ , ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ. ಇದು ಸರ್ವಜನಾಂಗದ ಶಾಂತಿಯ ತೋಟ. ನನ್ನ ಜೀವನದ ದರ್ಶನ ಯಾವತ್ತಿಗೂ ಜೀವಪರ. ಅಸ್ತ್ರಗಳಿಂದಲ್ಲ, ಅಕ್ಷರದಿಂದ ಬದುಕನ್ನು ಗೆಲ್ಲಬಹುದು. ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು ಎಂದರು.

ಈ ನೆಲದ ಪರಂಪರೆಯೇ ಸರ್ವಜನಾಂಗದ ಶಾಂತಿಯ ತೋಟ ವಾಗಿದೆ. ಈ ತೋಟದಲ್ಲಿ ಪ್ರತಿ ಹೂವು ತನ್ನ ಬಣ್ಣದಲ್ಲೇ ಅರಳಲಿ, ಪ್ರತಿ ಹಕ್ಕಿ ತನ್ನ ರಾಗದಲ್ಲೇ ಹಾಡಲಿ, ಆದರೆ ಒಟ್ಟಿಗೆ ಸೇರಿದಾಗ ಅದು ಸೌಹಾರ್ದ ಸಿಂಫನಿಯಾಗಲಿ. ಪ್ರಜಾಪ್ರಭುತ್ವವು ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ. ಅದು ಪ್ರತಿಯೊಬ್ಬರ ಧ್ವನಿಯನ್ನು ಗೌರವಿಸುವ ಮನೋಭಾವ. ಅದು ಬೇರೆಯವರ ಬದುಕಿನಲ್ಲಿ ಅರ್ಥಪೂರ್ಣವಾಗಿ ನಡೆದುಕೊಳ್ಳುವ ಜವಾಬ್ದಾರಿ. ಅದನ್ನು ಗೌರವಿಸುವು ನಮ್ಮೆಲ್ಲರ ಕರ್ತವ್ಯ ಎಂದರು.

ನಾವೆಲ್ಲಾ ಒಂದೇ ಗಗನದಡಿಯ ಪಯಣಿಗರು

ನಾವು ಎಲ್ಲರೂ ಒಂದೇ ಗಗನದಡಿಯ ಪಯಣಿಗರು. ಆಕಾಶವು ಯಾರನ್ನೂ ಬೇರ್ಪಡಿಸುವುದಿಲ್ಲ. ಭೂಮಿ ಯಾರನ್ನೂ ತಳ್ಳುವುದಿಲ್ಲ. ಮನುಷ್ಯನು ಮಾತ್ರ ಗಡಿ ಹಾಕುತ್ತಾನೆ. ಆ ಗಡಿಗಳನ್ನು ನಾವೇ ಅಳಿಸಬೇಕು. ಇಂದು ಈ ಹಬ್ಬ ಮೈಸೂರಿನ ಬೀದಿಗಳಲ್ಲಿ ಮಾತ್ರವತ್ತ. ಇಡೀ ಜಗತ್ತಿನ ಹೃದಯಗಳಲ್ಲಿ ಬೆಳಗಲಿ ಎಂದರು.

ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ:

ಇತಿಹಾಸದತ್ತ ನೋಡಿದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದೆಂದಿಗೂ ಪ್ರಸ್ತುತವಾಗುತ್ತಾರೆ. ಅವರು ಹಂಚಿಕೊಳ್ಳುವ ಮನದ ಅರಸ. ರಾಜಕೀಯ, ಆರ್ಥಿಕ, ಸಾಮಾಜಿಕ ನ್ಯಾಯದ ಔದಾರ್ಯದ ದೊರೆಯಾಗಿದ್ದರು. ಭೇದ ಭಾವಕ್ಕಿಂತ ವಿಶಾಲ ಮನಸ್ಸಿಗೆ ಗೌರವವಿತ್ತು. ಅವರು ನೀಡಿದ ಸಂದೇಶ ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ. ಶಕ್ತಿಯನ್ನು ಹಂಚಿಕೊಂಡಾಗ ಮಾತ್ರ ದೀರ್ಘಕಾಲ ಬದುಕತ್ತದೆ ಎಂದರು.

ಸಂಸ್ಕೃತಿ ನಮ್ಮ ಬೇರು ಸೌಹಾರ್ದ ನಮ್ಮ ಶಕ್ತಿ:

ಸಂಸ್ಕೃತಿ ನಮ್ಮ ಬೇರು. ಸೌಹಾರ್ದ ನಮ್ಮ ಶಕ್ತಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಭಾರತದ ನೆಲೆಯಲ್ಲಿ ನಮ್ಮ ಯುವಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ , ಪ್ರೀತಿಯ ಹೊಸ ಸುಧಾರಿತ ಸಮಾಜವನ್ನು ಕಟ್ಟೋಣ ಎಂದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment