ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ವಿವಾದ ಇಲ್ಲಿಗೆ ಮುಗಿಸೋಣ – ಸಿಎಂ ಹೆಸರು ಸಮರ್ಥಿಸಿದ್ದ ಪ್ರತಾಪ್ ಸಿಂಹ ಯೂ ಟರ್ನ್

On: December 30, 2024 9:31 AM
Follow Us:
---Advertisement---

ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ‌ ಮಾಡುವ ವಿಚಾರದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಯೂ ಟರ್ನ್ ಹೊಡೆದಿದ್ದಾರೆ. ದಾಖಲೆಗಳಲ್ಲಿ ಮಹಾರಾಜರ ಕಾಲದಲ್ಲೇ ಪ್ರಿನ್ಸಸ್ ರಸ್ತೆ ಎಂದು ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ‌ ಎಂದು ಅವರು ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಕೆಆರ್‌ಎಸ್ ರಸ್ತೆಗೆ ಪ್ರಿನ್ಸಸ್ ಎಂದು ಮಹಾರಾಜರ ಕಾಲದಲ್ಲೇ ಹೆಸರಿತ್ತು ಎನ್ನುವುದಾದರೇ ಬದಲಾವಣೆ ಮಾಡುವುದು ಬೇಡ. ಈ ವಿಚಾರಕ್ಕೆ ನನ್ನ ತಕರಾರಿಲ್ಲ. ಹೆಸರು ಬದಲಾವಣೆ ಮಾಡುವುದು ಬೇಡ‌ ಎಂದು ಸ್ಥಳೀಯ ಶಾಸಕ ಹರೀಶ್ ಗೌಡ ಅವರಿಗೆ ನಾನೇ ಮನವಿ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ

ಕೆಆರ್‌ಎಸ್ ರಸ್ತೆಗೆ ಅಧಿಕೃತ ಹೆಸರಿಲ್ಲ, ಖಾಲಿ‌ ಇದೆ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಹೆಸರನ್ನು ಇಡಬಹುದು ಎಂದು ಹೇಳಿದ್ದೆ. ದಯವಿಟ್ಟು ನೋಟಿಫಿಕೇಷನ್ ವಾಪಸ್ ತೆಗೆದುಕೊಳ್ಳಿ. ತಕರಾರು ಸಲ್ಲಿಸುವವರು ದಾಖಲೆಯನ್ನ ಒದಗಿಸಿ. ವಿವಾದವನ್ನು ಇಲ್ಲಿಗೆ ಮುಗಿಸೋಣ. ಮೈಸೂರಿಗೆ ಮಹಾರಾಜರ ಕೊಡುಗೆ ಬಹಳಷ್ಟಿದೆ. ಜನಪ್ರತಿನಿಧಿಗಳ ಕೊಡುಗೆ ಕೂಡ ಇದೆ. ಇಟ್ಟಿರುವ ಹೆಸರನ್ನು ಬದಲಾಯಿಸುವ ದಾಷ್ಟ್ಯ ನಮಗೆ ಬೇಡ‌ ಎಂದಿದ್ದಾರೆ.

Join WhatsApp

Join Now

Join Telegram

Join Now

Leave a Comment