ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಧರ್ಮದ ಹೆಸರಿನಲ್ಲಿ ಮತ ಪಡೆಯುತ್ತಿರುವ ಬಿಜೆಪಿ ಮುಖವಾಡ ಕಳಚೋಣ: ಸೈಯದ್ ಖಾಲಿದ್ ಅಹ್ಮದ್ ಕರೆ

On: July 9, 2025 4:20 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE_09-07_2025

ದಾವಣಗೆರೆ: ಕಾಂಗ್ರೆಸ್ ಪಕ್ಷವು ದೇಶಕ್ಕೆ ನೀಡಿರುವ ಕೊಡುಗೆ ಅಪಾರ. ಇಂದಿಗೂ ಯೋಜನೆಗಳು ಜನರ ಮನೆ ಬಾಗಿಲು ತಲುಪಿವೆ. ಕೇವಲ ಭರವಸೆ ನೀಡಿ ಯುವಜನರ ಮನಸ್ಸಿನಲ್ಲಿ ವಿಷ ಬೀಜ ಬಿತ್ತಿ, ಧರ್ಮದ ಅಮಲಿನಲ್ಲಿ ತೇಲಾಡುವಂತೆ ಮಾಡಿ ಮತ ಪಡೆಯುತ್ತಿರುವ ಬಿಜೆಪಿ ಮುಖವಾಡ ಬಯಲು ಮಾಡಬೇಕಿದೆ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆ,ಸ್ ಕಾರ್ಯದರ್ಶಿ ಹಾಗೂ ತೆಲಂಗಾಣ ಯುವ ಕಾಂಗ್ರೆಸ್ ಉಸ್ತುವಾರಿ ಸೈಯದ್ ಖಾಲಿದ್ ಅಹ್ಮದ್ ಅವರು ಕರೆ ನೀಡಿದರು.

ತೆಲಂಗಾಣದ ವಾರಂಗಲ್ ಪಟ್ಟಣದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಚರಣ್ ರೆಡ್ಡಿ ನೇತೃತ್ವದಲ್ಲಿ ಆಯೋಜಿಸಿದ್ದ ವಾರಂಗಲ್ ಯುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,
ಯುವಕರಿಗೆ ತಪ್ಪು ಮಾಹಿತಿ ನೀಡಿ ಧರ್ಮದ ಹೆಸರಿನಲ್ಲಿ ಮನಸು ಕಲುಷಿತಗೊಳಿಸುವ ಕೆಲಸ ಈ ಹಿಂದೆಯೂ ಬಿಜೆಪಿ ಮಾಡಿತ್ತು. ಈಗಲೂ ಮಾಡುತ್ತಿದೆ. ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಯುವ ಕಾಂಗ್ರೆಸ್ ಘಟಕದವರು
ಮಾಡಬೇಕು ಎಂದು ಸಲಹೆ ನೀಡಿದರು.

ಭಾರತ ದೇಶದಲ್ಲಿ ಕಳೆದ ಹನ್ನೊಂದು ವರ್ಷಗಳಲ್ಲಿ ಲಕ್ಷಾಂತರ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುತ್ತೇವೆಂದು ಚುನಾವಣೆ ಬಂದಾಗ ಭರವಸೆ ನೀಡುವ ಕೇಂದ್ರ ಸರ್ಕಾರವು ಇದುವರೆಗೆ
ಈಡೇರಿಸುವ ಕೆಲಸ ಮಾಡಿಲ್ಲ. ಉದ್ಯೋಗ ಸೃಷ್ಟಿ ಬಗ್ಗೆ ಮಾತನಾಡುತ್ತಿಲ್ಲ. ದೊಡ್ಡ ದೊಡ್ಡ ಕೈಗಾರಿಕೆಗಳು ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಕ್ಕೆ ಬಂದಿಲ್ಲ. ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡುವುದು ಭರವಸೆಯಾಗಿ
ಉಳಿದಿದೆಯೇ ಹೊರತು ಜಾರಿಯಾಗಿಲ್ಲ. ಈ ಬಗ್ಗೆ ಪ್ರಶ್ನಿಸುವಂತೆಯೂ ಇಲ್ಲ ಎಂಬಂತ ಸ್ಥಿತಿ ಬಂದೊದಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ರಾಷ್ಟ್ರದ ಹಿತದ ಬಗ್ಗೆ ಮಾತನಾಡಿದರೆ ವಿರೋಧಿ ಪಟ್ಟ ಕಟ್ಟುವ ಕೆಲಸ ನಡೆಯುತ್ತದೆ. ಉದ್ಯೋಗಾವಕಾಶ ನೀಡಿ ಎಂಬ ಆಗ್ರಹ ಯುವಜನತೆಯಿಂದ ಹೆಚ್ಚಾಗಿ ಕೇಳಿ ಬರಬೇಕು. ಇಲ್ಲದಿದ್ದರೆ ತಕ್ಕ ಪಾಠ ಕಲಿಸುತ್ತೇವೆ ಎಂಬ ಎಚ್ಚರಿಕೆಯ ಸಂದೇಶವೂ ರವಾನೆಯಾಗಬೇಕು. ಚುನಾವಣೆ ಬಂದಾಗ ಮಾತ್ರ ಯುವಕರು, ಉದ್ಯೋಗ ಸೃಷ್ಟಿಸುತ್ತೇವೆಂಬ ಸುಳ್ಳು ಹೇಳುವ ನಾಯಕರಿಗೆ ಪಾಠ ಕಲಿಸುವವರೆಗೂ ಯುವಜನಾಂಗಕ್ಕೆ ಒಳ್ಳೆಯ ಜೀವನ ಸಾಧ್ಯವಾಗದು ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಕೊಟ್ಟಿರುವ ಕಾರ್ಯಕ್ರಮಗಳು ಸಾವಿರಾರು. ಉಳುವವನೆ ಭೂ ಒಡೆಯ, ಆಹಾರ ಭದ್ರತಾ ಕಾಯ್ದೆ, ಕೃಷಿ ಕಾಯ್ದೆ, ಮಾಹಿತಿ ಹಕ್ಕು, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ಸೇರಿದಂತೆ ಹಲವು ಕಾರ್ಯಕ್ರಮಗಳು ಜಾರಿಯಾಗಿವೆ. ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಭಾಷಣ, ಭರವಸೆಗೆ ಸೀಮಿತವಾಗಿದೆ. ಈ ವಿಚಾರವನ್ನು ಯುವಕರು, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದವರಿಗೆ ತಿಳಿಸಿಕೊಡುವ ಕೆಲಸ ಆಗಬೇಕು. ಕಾಂಗ್ರೆಸ್ ಯುವ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ನೀಡುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಸಿಲಿಂಡರ್ ದರ, ಆಹಾರ ಧಾನ್ಯಗಳ ಬೆಲೆ, ತೈಲ ದರ, ಶಿಕ್ಷಣ, ವೈದ್ಯಕೀಯ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿಯೂ ಬೆಲೆ ಏರಿಕೆಯತ್ತ ಸಾಗುತ್ತಿದೆಯೇ ವಿನಾಃ ಕಡಿಮೆಯಾಗುತ್ತಿಲ್ಲ. ಬಡವರು, ಮಧ್ಯಮ ವರ್ಗದವರ ಬದುಕು ತುಂಬಾನೇ ಕಷ್ಟವಾಗಿದೆ. ಶ್ರೀಮಂತರ ಪರವಾಗಿ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತಲೇ ಬರುತ್ತದೆ. ಮುಂಬರುವ ಚುನಾವಣೆಯಲ್ಲಿ ಸಂಘಟಿತರಾಗಿ ಕೆಲಸ ಮಾಡಿ. ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವವರೆಗೂ ಪ್ರಾಮಾಣಿಕರಾಗಿ, ಒಂದಾಗಿ, ಯಾವುದೇ ಭಿನ್ನಾಭಿಪ್ರಾಯ ಇಲ್ಲದೇ ಕೆಲಸ ಮಾಡೋಣ ಎಂದು ಸೈಯದ್ ಖಾಲಿದ್ ಅಹ್ಮದ್ ಹೇಳಿದರು.

ವೇದಿಕೆಯಲ್ಲಿ ತೆಲಂಗಾಣ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಚರಣ್ ರೆಡ್ಡಿ, ವಾರಂಗಲ್ ಪೂರ್ವ ಶಾಸಕಿ ನೈನಿ ರಾಜೇಂದರ್ ರೆಡ್ಡಿ, ವರ್ಧನಪೇಟೆ ಶಾಸಕ ಕೆ. ಆರ್. ನಾಗರಾಜು ಮತ್ತು ಇತರ ರಾಜ್ಯ ಪದಾಧಿಕಾರಿಗಳು ಹಾಜರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment