ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕರ್ನಾಟಕದ ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ಯಾಕೆ?

On: March 14, 2025 12:43 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:14-03-2025

ಹಾವೇರಿ: ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದು, ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.

ದೇಶದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳು ಮೆಣಸಿನಕಾಯಿ ಬೆಳೆಯುವ ರಾಜ್ಯಗಳಾಗಿದ್ದು, ಮೆಣಸಿನಕಾಯಿ ಇಡೀ ದೇಶದಲ್ಲಿ ಎಲ್ಲರೂ ಉಪಯೋಗಿಸುವ ಪದಾರ್ಥವಾಗಿದ್ದು, ವಿದೇಶಗಳಿಗೂ ದೊಡ್ಡ ಪ್ರಮಾಣದಲ್ಲಿ ರಪ್ತು ಮಾಡಲಾಗುತ್ತದೆ. ಮೆಣಸಿನಕಾಯಿ ಬೆಳೆ ಅತ್ಯಂತ ಸೂಕ್ಷ್ಮ ಬೆಳೆಯಾಗಿದ್ದು ಅದನ್ನು ಕೀಟಗಳ ಹಾವಳಿಯಿಂದ ಕಾಪಾಡಿಕೊಂಡು ರಕ್ಷಣೆ ಮಾಡುವುದು ಅತ್ಯಂತ ಸವಾಲಿನ ಕೆಲಸವಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಮೆಣಸಿನಕಾಯಿ ಉತ್ಪಾದನೆ ಸಾಮಾನ್ಯವಾಗಿದ್ದರೂ, ಆಂತರಿಕ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಹೊಟ್ಟೆಬಾಕುತನದಿಂದ ದೊಡ್ಡ ಪ್ರಮಾಣದ ಮೆಣಸಿನಕಾಯಿ ಮಾರಾಟವಾಗದೇ ಹಾಗೇ
ಉಳಿದಿದ್ದು, ರೈತರನ್ನು ಸಂಕಷ್ಟಕ್ಕೀಡು ಮಾಡಿದೆ. ರಸಗೊಬ್ಬರ ಕೀಟನಾಶಕಗಳ ಬೆಲೆ ಹೆಚ್ಚಳದಿಂದಾಗಿ ಮೆಣಸಿನಕಾಯಿ ಬೆಳೆಯಲು ಸಾಕಷ್ಟು ವೆಚ್ಚವಾಗುತ್ತಿರುವುದು ತಮಗೆ ಗೊತ್ತಿದೆ. ಇದರಿಂದ ಮೆಣಸಿನಕಾಯಿ ಬೆಳೆಗಾರರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ.

ಕೇಂದ್ರ ಸರ್ಕಾರ ಆಂಧ್ರಪ್ರದೇಶದ ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ತೀರ್ಮಾನಿಸಿ ಆ ರೈತರ ರಕ್ಷಣೆಗೆ ಮುಂದಾಗಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಆದರೆ, ಇದರಲ್ಲಿ ಕರ್ನಾಟಕದ ರೈತರು ಇದರಲ್ಲಿ ಸೇರ್ಪಡೆಯಾಗಿರುವುದಿಲ್ಲ. ಈ ಯೋಜನೆ ಅಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರಿದಿಸುವುದು ಅತ್ಯಂತ ಮುಖ್ಯವಾಗಿರುತ್ತದೆ. ಇದರಿಂದ ಕರ್ನಾಟಕದ ರೈತರಿಗೂ ಅನುಕೂಲವಾಗಲಿದೆ. ಆದ್ದರಿಂದ ಇದೊಂದು ಮಹತ್ವದ ಮತ್ತು ಜರೂರು ವಿಷಯವೆಂದು ಪರಿಗಣಿಸಿ ಕರ್ನಾಟಕರ ರಾಜ್ಯದ ಮೆಣಸಿನಕಾಯಿ ಬೆಳೆಯುವ ರೈತರ ರಕ್ಷಣೆಗೆ ಬರಬೇಕೆಂದು ವಿನಂತಿಸಿಕೊಂಡಿದ್ದಾರೆ.‌

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಅಂತರಾಷ್ಟ್ರ

ನ. 26ರಿಂದ ಐದು ದಿನಗಳ ಶಾಮನೂರು ಡೈಮಂಡ್, ಶಿವಗಂಗಾ ಕಪ್ 2025: ಅಂತರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಆಯೋಜನೆ

ಅಪಘಾತದಲ್ಲಿ ಮೃತಪಟ್ಟ ಶಿಕ್ಷಕನ ಕುಟುಂಬಕ್ಕೆ ಸಿಕ್ತು 1 ಕೋಟಿ ಪರಿಹಾರ! ಸಿಕ್ಕಿದ್ದು ಹೇಗೆ ಗೊತ್ತಾ?

ಭದ್ರತೆ

ಭದ್ರತೆ ಸವಾಲು ನಿಭಾಯಿಸದ, ದೇಶದ ಭದ್ರತಾ ವ್ಯವಸ್ಥೆ ವೈಫಲ್ಯ ಹೊಣೆ ಹೊತ್ತು ಅಮಿತ್ ಶಾ ರಾಜೀನಾಮೆ ನೀಡಲಿ: ಬಿ. ಕೆ. ಹರಿಪ್ರಸಾದ್ ಆಗ್ರಹ

ಧರ್ಮೇಂದ್ರ

ಧರ್ಮೇಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಾ ಚೇತರಿಕೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಹೇಮಾ ಮಾಲಿನಿ, ಇಶಾ ಡಿಯೋಲ್ ಕೆಂಡಾಮಂಡಲ!

ಪ್ರಭಾ ಮಲ್ಲಿಕಾರ್ಜುನ್

ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಹೆಚ್ಚಿನ ಸಂಶೋಧನೆಗೆ ಅನುದಾನ ಕೊಡುವಂತೆ ಕೇಂದ್ರ ಕೃಷಿ ಸಚಿವರಿಗೆ ಮನವಿ: ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ

ಕೆಂಪು ಕೋಟೆ ಪ್ರಬಲ ಸ್ಫೋಟ ಹಿನ್ನೆಲೆ: ದಾವಣಗೆರೆ ಜಿಲ್ಲೆಯಲ್ಲಿ ಹೇಗಿದೆ ಕಟ್ಟೆಚ್ಚರ?

Leave a Comment