Site icon Kannada News-suddikshana

ಬಿಪಿಎಲ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿ… ಇಲ್ಲದಿದ್ದರೆ?

SUDDIKSHANA KANNADA NEWS/ DAVANAGERE/ DATE:04-01-2025

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನ್ಯಾಮತಿ ತಾಲ್ಲೂಕಿನ ಪಡಿತರ ಚೀಟಿದಾರರಿಗೆ ಡಿಸೆಂಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ 35 ಕೆ.ಜಿ ಅಕ್ಕಿ ಪ್ರತಿ ಕಾರ್ಡಿಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 5 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಿಸಲಾಗುತ್ತದೆ.

ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಪಡಿತರ ಚೀಟಿದಾರರ ಖಾತೆಗೆ ನೇರ ನಗದು ವರ್ಗಾವಣೆ ಸಂಬಂಧಿಸಿದಂತೆ, ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯನ್ನು ಮಾಡಿಸಿಕೊಳ್ಳಬೇಕು ಹಾಗೂ ಹಣ ಪಡೆಯಲು ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಮ್ಮ ಬ್ಯಾಂಕ್ ಶಾಖೆಗಳಿಗೆ ಹಾಗೂ ಸ್ಥಳೀಯ ಆಹಾರ ನಿರೀಕ್ಷರನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಪಡಿತರ ಸಿಗುವುದಿಲ್ಲ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

Exit mobile version