SUDDIKSHANA KANNADA NEWS/ DAVANAGERE/DATE:20_08_2025
ದಾವಣಗೆರೆ: ದಾವಣಗೆರೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗುತ್ತದೆ.
READ ALSO THIS STORY: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಾವಣಗೆರೆಯಲ್ಲಿ ಬೃಹತ್ ಜಾಥಾ
ದಾವಣಗೆರೆ ಜಿಲ್ಲೆಯಾದ್ಯಂತ ಆಗಸ್ಟ್ 27 ರಂದು ಗಣೇಶ ಚತುರ್ಥಿ ಮತ್ತು ಸೆಪ್ಟೆಂಬರ್ 5 ರಂದು ಈದ್ ಮಿಲಾದ್ ಆಚರಿಸಲಿರುವ ಹಬ್ಬದ ಪ್ರಯುಕ್ತ ಆಗಸ್ಟ್ 31, ಸೆಪ್ಟೆಂಬರ್ 4 ಮತ್ತು 5 ರಂದು ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿ ಹಾಗೂ ಹರಿಹರ, ಚನ್ನಗಿರಿ, ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಒಟ್ಟಾರೆ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ
ಜಿ.ಎಂ ಆದೇಶಿಸಿದ್ದಾರೆ.
ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆ:
ಜಿಲ್ಲೆಯಾದ್ಯಂತ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಗುಣಗಳ್ಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ ಮಾರಾಟ ಮತ್ತು ಕೆರೆ ನದಿಗಳಲ್ಲಿ ಜಲಮೂಲಗಳಲ್ಲಿ ವಿಸರ್ಜನೆಯನ್ನು ನಿರ್ಬಂಧ ಹೆರುವ ಮೂಲಕ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಬೇಕು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸಿದ ಗಣೇಶ ವಿಗ್ರಹಗಳು ಹೊರರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ನಮ್ಮ ಜಿಲ್ಲೆಗೆ ಪ್ರವೇಶಿಸದಂತೆ ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಆದೇಶಿಸಿದ್ದಾರೆ.