Site icon Kannada News-suddikshana

ಸರ್ಕಾರಿ ಶಾಲೆಯಲ್ಲಿ ಎಲ್​ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್; ಸರ್ಕಾರದ ನಿರ್ಧಾರದ ವಿರುದ್ದ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು

ಕಳೆದ ಐವತ್ತು ವರ್ಷಗಳಿಂದ ರಾಜ್ಯದಲ್ಲಿ ಶಾಲಾಪೂರ್ವ ಶಿಕ್ಷಣದ ಜವಾಬ್ದಾರಿ ಇದ್ದದ್ದು ಅಂಗನವಾಡಿಗಳಿಗೆ. ಆದ್ರೆ, ರಾಜ್ಯ ಸರ್ಕಾರ ನಿಧಾನವಾಗಿ ಅಂಗನವಾಡಿ(Anganwadi)ಗಳನ್ನು ಬಂದ್ ಮಾಡುವ ಚಿಂತನೆಯಲಿದೆಯಾ ಎನ್ನುವ ಅನುಮಾನ ಇದೀಗ ಅಂಗನವಾಡಿ ಕಾರ್ಯಕರ್ತೆಯರನ್ನು ಕಾಡಲು ಆರಂಭಿಸಿದೆ.

ಕೊಪ್ಪಳ ನಗರ ಸೇರಿದಂತೆ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಯಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಕಳೆದ ಐವತ್ತು ವರ್ಷಗಳಿಂದ ರಾಜ್ಯದಲ್ಲಿ ಶಾಲಾಪೂರ್ವ ಶಿಕ್ಷಣದ ಜವಾಬ್ದಾರಿ ಇದ್ದದ್ದು ಅಂಗನವಾಡಿಗಳಿಗೆ. ಆದ್ರೆ, ರಾಜ್ಯ ಸರ್ಕಾರ ನಿಧಾನವಾಗಿ ಅಂಗನವಾಡಿ(Anganwadi)ಗಳನ್ನು ಬಂದ್ ಮಾಡುವ ಚಿಂತನೆಯಲಿದೆಯಾ ಎನ್ನುವ ಅನುಮಾನ ಇದೀಗ ಅಂಗನವಾಡಿ ಕಾರ್ಯಕರ್ತೆಯರನ್ನು
ಕಾಡಲು ಆರಂಭಿಸಿದೆ. ಇದಕ್ಕೆ ಕಾರಣ, ಸರ್ಕಾರಿ ಶಾಲೆಯಲ್ಲಿ ಸರ್ಕಾರ ಎಲ್​ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ಮುಂದಾಗಿರುವುದು. ಹೌದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಯೋಗಿಕವಾಗಿ ಆಯ್ದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ ಎಲ್​ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದು ಅಂಗನವಾಡಿ ಕಾರ್ಯಕರ್ತೆಯರ ಆಕ್ರೋಶಕ್ಕೆ ಕಾರಣವಾಗಿದ್ದು, ಕಾರ್ಯಕರ್ತೆಯರು ಇದೀಗ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ.

ಹೀಗಾಗಿ ಸರ್ಕಾರಿ ಶಾಲೆಯಲ್ಲಿ ಎಲ್​ಕೆಜಿ, ಯುಕೆಜಿ ಆರಂಭಿಸುವುದನ್ನು ಸರ್ಕಾರ ಬಿಡಬೇಕು. ಬದಲಾಗಿ ಅಂಗನವಾಡಿಗಳಿಗೆ ಎಲ್​ಕೆಜಿ, ಯುಕೆಜಿ ನಡೆಸಲು ಅವಕಾಶ ನೀಡಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ. ಸರ್ಕಾರ ತನ್ನ ಆದೇಶ ಹಿಂಪಡೆಯದೇ ಇದ್ದರೆ, ಉಗ್ರ ಹೋರಾಟ ನಡೆಸೋ ಎಚ್ಚರಿಕೆ ಕೂಡ ನೀಡಿದ್ದಾರೆ. ಸರ್ಕಾರಿ ಶಾಲೆಯಲ್ಲಿಯೇ ಎಲ್ ಕೆ ಜಿ, ಯುಕೆಜಿ ಆರಂಭಿಸಿದ್ರೆ, ಮುಂದೆ ಒಂದನೇ ತರಗತಿಯಿಂದ ಕೂಡ ಮಕ್ಕಳು ಅಲ್ಲಿಯೇ ಮುಂದುವರಿಯುತ್ತಾರೆ. ಇದರಿಂದ ಸರ್ಕಾರಿ ಶಾಲೆಗಳಿಗೆ ಮಕ್ಕಳ ಸಂಖ್ಯೆ ಕಡಿಮೆಯಾಗೋದಿಲ್ಲ. ಇನ್ನು ಪೂರ್ವಪ್ರಾಥಮಿಕ ಶಿಕ್ಷಣ ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿದ್ದು, ಅದನ್ನು ಶಿಕ್ಷಣ ಇಲಾಕೆಗೆ ಸೇರಿಸುವುದರಿಂದ ಒಂದೇ ಇಲಾಖೆಯಡಿ, ಮಕ್ಕಳ ಸಮಗ್ರ ಶಿಕ್ಷಣಕ್ಕೆ ಅನಕೂಲವಾಗುತ್ತದೆ ಎನ್ನುವುದು ಸರ್ಕಾರದ ಚಿಂತನೆ. ಆದ್ರೆ, ಇದೇ ಇದೀಗ ಅಂಗನವಾಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಯಕರ್ತೆಯರು ಭಯಕ್ಕೆ ಕಾರಣವಾಗಿದೆ. ಹೀಗಾಗಿ ಸರ್ಕಾರ ಆಗಿರುವ ಗೊಂದಲವನ್ನು ಸರ್ಕಾರ ಬಗೆಹರಿಸಬೇಕಿದೆ.

Exit mobile version