ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನದ ಲೊಗೋ ಬಿಡುಗಡೆಗೊಳಿಸಿದ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್

On: March 2, 2024 9:45 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:02-03-2024

ದಾವಣಗೆರೆ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲೋಗೋವನ್ನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಬಿಡುಗಡೆಗೊಳಿಸಿದರು.

ಮಾರ್ಚ್ 18 ಮತ್ತು 19ರಂದು ಹರಿಹರದ ಸಿದ್ದೇಶ್ವರ ಪ್ಯಾಲೇಸ್ ನಲ್ಲಿ ಆಯೋಜನೆಗೊಂಡಿರುವ ದಾವಣಗೆರೆ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲೋಗೋವನ್ನು ನಗರದ ಶ್ರೀ ಕಲ್ಲೇಶ್ವರ ಅಕ್ಕಿ ಗಿರಣಿ
ಆವರಣದಲ್ಲಿನ ತಮ್ಮ ಕಚೇರಿಯಲ್ಲಿ ಲೋಗೋ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ್ ಅವರು, ಜಿಲ್ಲಾ ಕಸಾಪ ಒಳ್ಳೊಳ್ಳೆಯ ಕಾರ್ಯಕ್ರಮ ನಡೆಸುತ್ತಾ ಬಂದಿದೆ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಬಿಡುಗಡೆಗೊಳಿಸುತ್ತಿರುವುದು ಒಂದು ವಿನೂತನ ಪ್ರಯತ್ನ. ಸಂತೋಷದ ಸಂಗತಿ. ಇದಕ್ಕೆ ಅಧ್ಯಕ್ಷ ಬಿ. ವಾಮದೇವಪ್ಪ ಹಾಗೂ ಅವರ ತಂಡವನ್ನು ಅಭಿನಂದಿಸುತ್ತೇನೆ. ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಕೋರಿದರು.

ಪರಿಷತ್ತಿನ ಅಧ್ಯಕ್ಷ ಬಿ. ವಾಮದೇವಪ್ಪರು ಮಾತನಾಡಿ, ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸುವುದರೊಂದಿಗೆ ಅವರ ಸಹಕಾರವನ್ನು ಕೋರಿದರು. ದಾವಣಗೆರೆ ಜಿಲ್ಲಾ ಕ ಸಾ ಪ ಮೊದಲ ಬಾರಿಗೆ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಗೌರವ ಕಾರ್ಯದರ್ಶಿಗಳಾದ ಬಿ ದಿಳ್ಳೆಪ್ಪ ರೇವಣಸಿದ್ದಪ್ಪ ಅಂಗಡಿ, ಸಂಘಟನಾ ಕಾರ್ಯದರ್ಶಿಗಳಾದ ಸಿ ಜಿ ಜಗದೀಶ್ ಕೂಲಂಬಿ, ಜಿಗಳಿ ಪ್ರಕಾಶ್, ನಿರ್ದೇಶಕರಾದ ಬೈರೇಶ್ವರ ಬಿ ಎಂ, ಎನ್ ಎಸ್ ರಾಜು, ರುದ್ರಾಕ್ಷಿ ಬಾಯಿ, ಸುದರ್ಶನ್ ಎಂ ಎ, ದಾವಣಗೆರೆ ತಾಲೂಕು ಕಸಾಪ ಅಧ್ಯಕ್ಷೆ ಸುಮತಿ ಜಯಪ್ಪ, ನಿರ್ದೇಶಕರಾದ ಎ. ಎಂ. ಸಿದ್ದೇಶ್ ಕುರ್ಕಿ, ಹರಿಹರ ತಾಲೂಕು ಕಸಾಪ ಅಧ್ಯಕ್ಷ ಡಿ. ಎಂ. ಮಂಜುನಾಥಯ್ಯ, ಕಾರ್ಯದರ್ಶಿ ಚಿದಾನಂದ ಕಂಚಿಕೇರಿ, ಜಿ ಎಸ್ ನಾಗರಾಜ ಕೋಡಿಹಳ್ಳಿ, ಮಲ್ಲಿಕಾರ್ಜುನ ಆರ್ ಬಿ, ಅಶೋಕ ಸಾಲ ಕಟ್ಟೆ, ವಾಸುದೇವ ಮೂರ್ತಿ, ಹಾಗೂ ಬಸವಂತಪ್ಪ ಎಂ ಬೇತೂರು ಮುಂತಾದವರು ಉಪಸ್ಥಿತರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment