ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜಿಯಾಗಬಲ್ಲ ವ್ಯಾಜ್ಯ ಪರಿಹರಿಸಿಕೊಳ್ಳಬೇಕಾ? ಹಾಗಿದ್ದರೆ ಮಾ. 8ಕ್ಕೆ ಇದೆ ಚಾನ್ಸ್!

On: February 18, 2025 9:48 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-02-2025

ದಾವಣಗೆರೆ: ಜಿಲ್ಲಾ ನ್ಯಾಯಾಲಯ ಸೇರಿದಂತೆ ಎಲ್ಲಾ ತಾಲ್ಲೂಕಿನ ನ್ಯಾಯಾಲಯಗಳಲ್ಲಿ ಮಾರ್ಚ್ 8 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು ಇಲ್ಲಿ ರಾಜೀಯಾಗಬಲ್ಲ ಎಲ್ಲ ಪ್ರಕರಣಗಳನ್ನು ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.

ನ್ಯಾಯಾಲಯದ ಆವರಣದಲ್ಲಿನ ವಕೀಲರ ಭವನದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತಾನಾಡಿದರು.

ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಇದರ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಲೋಕ್ ಅದಾಲತ್ ನಡೆಯಲಿದೆ ಎಂದು ತಿಳಿಸಿದರು.

ಈ ಲೋಕ್ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು ಲೋಕ್ ಅದಾಲತ್ ನಲ್ಲಿ ಪರಿಹರಿಸಿಕೊಳ್ಳಬಹುದು. ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು (ವಿಚ್ಛೇಧನ ಹೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು. ಹಾಗೂ ಸಿವಿಲ್ ವ್ಯಾಜ್ಯಗಳಲ್ಲಿ ಪಕ್ಷಗಾರರು ಲೋಕ್ ಅದಾಲತ್‍ನಲ್ಲಿ ರಾಜಿಯಾದರೆ ಪಕ್ಷಗಾರರು ಸರ್ಕಾರಕ್ಕೆ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ವಾಪಸ್ ಕೊಡಲು ಅವಕಾಶವಿದೆ ಎಂದರು.

1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಹೆಚ್.ಅಣ್ಣಯ್ಯನವರ್ ಮಾತನಾಡಿ ಲೋಕ ಅದಾಲತ್‍ನ ಮೂಲಕ ಸಾರ್ವಜನಿಕರಿಗೆ ಶೀಘ್ರ ಮತ್ತು ಕಡಿಮೆ ಖರ್ಚಿನಲ್ಲಿ ನ್ಯಾಯ ಒದಗಿಸುವಲ್ಲಿ ವಕೀಲರ ಪಾತ್ರ ಬಹು ಮುಖ್ಯವಾಗಿದೆ ಎಂದರು. ವಕೀಲರು ನ್ಯಾಯಾಲಯಕ್ಕೆ ಬರುವ ಕಕ್ಷಿದಾರರಿಗೆ ಅತ್ಯುತ್ತಮ ಮಾರ್ಗಗಳನ್ನು ನೀಡಬೇಕೆಂದು ಕರೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣನವರ ಮಾತನಾಡಿ ಲೋಕ್ ಅದಾಲತ್‍ನಲ್ಲಿ ಉಭಯ ಪಕ್ಷಗಾರರು ಪರಸ್ಪರ ಒಪ್ಪಿದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆಶಯದಂತೆ ಲೋಕ್ ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯಾರ್ಥಪಡಿಸಲು ಲೋಕ್-ಅದಾಲತ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಸಾರ್ವಜನಿಕರು ವಿಶೇಷವಾಗಿ ಕಕ್ಷಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಲೋಕ ಅದಾಲತ್‍ನ ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್ ಅರುಣಕುಮಾರ್, ದಾವಣಗೆರೆ ಘಟಕದ ನ್ಯಾಯಾಧೀಶರು, ವಕೀಲ ಸಂಘದ ಎಲ್ಲಾ ಪದಾಧಿಕಾರಿಗಳು, ಹಿರಿಯ ಮತ್ತು ಕಿರಿಯ ಹಾಗೂ ಮಹಿಳಾ ನ್ಯಾಯವಾದಿಗಳು ಭಾಗವಹಿಸಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment