Site icon Kannada News-suddikshana

18ನೇ ಲೋಕಸಭೆಯ ಸ್ಪೀಕರ್ ಆಗಿ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆ

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್ ಆಗಿ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ.

ಓಂ ಬಿರ್ಲಾ ಅವರು ಸ್ಪೀಕರ್ ಆಗಿ ಆಯ್ಕೆಯಾಗುವ ಮೂಲಕ ಸತತ 2ನೇ ಬಾರಿ ಸ್ಪೀಕರ್ ಹುದ್ದೆಗೆ ಏರಿದ್ದಾರೆ. ಓಂ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಓ ಬಿರ್ಲಾ ಅವರ ಹೆಸರನ್ನು ಅನುಮೋದಿಸಿದ ಬಳಿಕ ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಓಂ ಬಿರ್ಲಾ ಅವರ ಹೆಸರನ್ನು ಅನುಮೋದಿಸಿದರು.

ವಿರೋಧ ಪಕ್ಷದ ಸದಸ್ಯರು ಕೋಡಿಕುನ್ನಿಲ್ ಸುರೇಶ್ ಅವರ ಹೆಸರನ್ನು ಪ್ರಸ್ತಾಪಿಸಿ, ಅನುಮೋದಿಸಿದರು. ಈ ವೇಳೆ ಪೀಠದಲ್ಲಿ ಕುಳಿತಿದ್ದ ಹಂಗಾಮಿ ಸ್ಪೀಕರ್ ಭರ್ತೃಹರಿ ಮೆಹತಾಬ್ ಅವರು ಪ್ರಸ್ತಾಪವನ್ನು ಮತಕ್ಕೆ ಹಾಕಿದರು. ಧ್ವನಿ ಮತ ಮೂಲಕ ಪ್ರಸ್ತಾವನೆಗೆ ಅನುಮೋದನೆ ದೊರೆಯಿತು. ಆ ಬಳಿಕ ಓಂ ಬಿರ್ಲಾ ಸ್ಪೀಕರ್ ಆಗಿ ಆಯ್ಕೆಯಾಗಿರುತ್ತಾರೆ ಎಂದು ಹಂಗಾಮಿ ಸ್ಪೀಕರ್ ಘೋಷಣೆ ಮಾಡಿದ್ದಾರೆ.

Exit mobile version